7

‘ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ’

Published:
Updated:

ಶಿವಮೊಗ್ಗ: ಕ್ವಿಂಟಲ್‌ಗೆ ₹ 2,300 ಬೆಂಬಲ ಬೆಲೆ ನೀಡಿ ರೈತರು ಮಾರುವ ರಾಗಿಯನ್ನು ಖರೀದಿಸಿ, ಪಡಿತರ ವ್ಯವಸ್ಥೆಯಲ್ಲಿ ಉಚಿತವಾಗಿ ವಿತರಿಸಲಾಗುವುದು. ಇದೇ ರೀತಿ ಬಿಳಿ ಜೋಳಕ್ಕೆ ಮಾರುಕಟ್ಟೆಯಲ್ಲಿ ದರ ಕಡಿಮೆಯಾದರೆ ಅದನ್ನೂ ರೈತರಿಂದ ಖರೀದಿಸಿ ಪಡಿತರ ಮೂಲಕ ವಿತರಿಸಲು ಯೋಚಿಸಲಾಗಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಇಲ್ಲಿ ಆಯೋಜಿಸಿರುವ ಎರಡು ದಿನಗಳ ಸಾವಯವ, ಸಿರಿಧಾನ್ಯ ಮೇಳವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಿರಿಧಾನ್ಯ ಹಾಗೂ ಸಾವಯವ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಲು ಶಿವಮೊಗ್ಗದಲ್ಲಿ ಉತ್ಪನ್ನ ಮಳಿಗೆ ಆರಂಭಿಸಲು ಸಾವಯವ ರೈತರ ಒಕ್ಕೂಟ ಮುಂದೆ ಬಂದರೆ ಸರ್ಕಾರ ಎಲ್ಲ ನೆರವು ನೀಡಲಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry