7

ಯುವಕರನ್ನು ಸೆಳೆಯಲು ರಾಹುಲ್‌ ಗಾಂಧಿ ಚಿಂತನೆ

Published:
Updated:
ಯುವಕರನ್ನು ಸೆಳೆಯಲು ರಾಹುಲ್‌ ಗಾಂಧಿ ಚಿಂತನೆ

ಶಿವಮೊಗ್ಗ: ಮಹಾದಾಯಿ ಯೋಜನೆಯ ವಿಷಯವನ್ನು ಬಿಜೆಪಿ ಕೇವಲ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಕೃಷಿ ಸಚಿವ ಕೃಷ್ಣಭೈರೇಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈಗ ಇದರ ಬಗ್ಗೆ ಆಸಕ್ತಿ ವಹಿಸಿ, ರೈತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಮುಂಬರುವ ದಿನಗಳಲ್ಲಿ ರಾಜ್ಯದ ಯುವಕರನ್ನು ಸೆಳೆಯಲು ರಾಹುಲ್‌ ಗಾಂಧಿ ಚಿಂತನೆ ನಡೆಸಿದ್ದಾರೆ. ರಾಹುಲ್‌ ನೇತೃತ್ವದಲ್ಲಿ ಚುನಾವಣೆ ನಡೆಸಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳ ಮೂಲಕ ಮತ್ತೆ ಅಧಿಕಾರ ಪಡೆಯಲು ಯೋಜನೆ ರೂಪಿಸಲಾಗಿದೆ ಎಂದರು.

ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಪ್ರತ್ಯೇಕ ಪ್ರವಾಸ ಕೈಗೊಂಡಿರುವುದಕ್ಕೆ ರಾಜಕೀಯ ಬಣ್ಣ ಬಳಿಯುವುದು ಬೇಡ. ಸರ್ಕಾರ ಯೋಜನೆಯನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಪ್ರತ್ಯೇಕ ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಬಸ್‌ನಲ್ಲಿ ಬಂದ ಸಚಿವರು ನಗರದ ಕೃಷಿ ವಿವಿ ಘಟಿಕೋತ್ಸವ ಹಾಗೂ ಸಾವಯವ ಮೇಳದಲ್ಲಿ ಪಾಲ್ಗೊಳ್ಳಲು ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಬಂದಿದ್ದು ವಿಶೇಷವಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry