7

ಅತ್ಯಾಚಾರಿಗಳ ಬಂಧನಕ್ಕೆ ಎಬಿವಿಪಿ ಒತ್ತಾಯ

Published:
Updated:

ಬೆಳಗಾವಿ: ವಿಜಯಪುರದ ದಲಿತ ಬಾಲಕಿ ದಾನೇಶ್ವರಿ ಅವರನ್ನು ಅತ್ಯಾಚಾರ ಎಸಗಿ, ಹತ್ಯೆ ಮಾಡಿದ ಅತ್ಯಾಚಾರಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಎಬಿವಿಪಿ ರಾಜ್ಯ ಕಾರ್ಯದರ್ಶಿ ರಾಜೇಶ ಗುರಾಣಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು, ಕೆಲಹೊತ್ತು ವಾಹನಗಳ ಸಂಚಾರಕ್ಕೆ ತಡೆಯೊಡ್ಡಿದರು.

ತಮ್ಮ ಮಗಳ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದ ಆರೋಪಿಗಳ ವಿರುದ್ಧ ಪೋಷಕರು ದೂರು ನೀಡಲು ಪೊಲೀಸ್‌ ಠಾಣೆಗೆ ಹೋದಾಗ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿಲ್ಲ. ಪೋಷಕರು ಹಾಗೂ ಸಾರ್ವಜನಿಕರು ಠಾಣೆ ಎದುರು ಪ್ರತಿಭಟನೆ ನಡೆಸಿದ ನಂತರ ದೂರು ದಾಖಲಿಸಿಕೊಂಡಿರುವುದನ್ನು ನೋಡಿದರೆ ಪೊಲೀಸರು ಯಾರದ್ದೋ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿರುವುದು ಕಂಡುಬರುತ್ತಿದೆ ಎಂದು ಆರೋಪಿಸಿದರು.

ದೂರು ದಾಖಲಿಸಲು ಹಿಂದೇಟು ಹಾಕಿದ ಪೊಲೀಸರ ವಿರುದ್ಧ ಕ್ರಮಕೈಗೊಳ್ಳಬೇಕು. ಪ್ರಕರಣವನ್ನು ಉನ್ನತ ಅಧಿಕಾರಿಗಳಿಂದ ತನಿಖೆ ಮಾಡಿಸಬೇಕು. ದಲಿತ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡುವಲ್ಲಿ ರಾಜ್ಯದ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry