7

‘ಯಡಿಯೂರಪ್ಪ ನಿರ್ಣಯ ಅಂತಿಮವಲ್ಲ’

Published:
Updated:
‘ಯಡಿಯೂರಪ್ಪ ನಿರ್ಣಯ ಅಂತಿಮವಲ್ಲ’

ಗಂಗಾವತಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಮಾಡುವ ಅಧಿಕಾರ ಕೇವಲ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಾತ್ರ ಇಲ್ಲ ಎಂದು ಮುಖಂಡ ಮುಕುಂದರಾವ್ ಭವಾನಿಮಠ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ. ಅಭ್ಯರ್ಥಿಗಳ ಘೋಷಣೆ ಮಾಡದಂತೆ ಹೈಕಮಾಂಡ್ ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದ್ದರೂ ಕನಕಗಿರಿ ಕ್ಷೇತ್ರದ ಅಭ್ಯರ್ಥಿ ವಿಚಾರದಲ್ಲಿ ಆತುರ ತೋರಿದ್ದಾರೆ.

ಕ್ಷೇತ್ರದಲ್ಲಿ ಹಲವರು ಅಕಾಂಕ್ಷಿಗಳಿದ್ದೇವೆ. ಎಲ್ಲರನ್ನು ಸೇರಿಸಿ ಚರ್ಚಿಸಬೇಕಿತ್ತು. ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿಯನ್ನು ಘೋಷಣೆ ಮಾಡಬೇಕಿತ್ತು. ಬಸವರಾಜ ದಢೇಸ್ಗೂರು ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದ ರೀತಿ ಸರಿಯಲ್ಲ ಎಂದರು.

ಈ ಬಗ್ಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರನ್ನು ಸಂಪರ್ಕಿಸಿದ್ದೇನೆ. ಬಿಜೆಪಿಯಲ್ಲಿ ಛಲವಾದಿ ಸಮುದಾಯಕ್ಕೆ ಅನ್ಯಾಯವಾಗದು ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry