7

ನಾಳೆ ನಂದಿಯಲ್ಲಿ ‘ಯುವ ಕೃಷಿ ಮೇಳ’

Published:
Updated:

ಚಿಕ್ಕಬಳ್ಳಾಪುರ: ರೈತ ದಿನಾಚರಣೆ ಅಂಗವಾಗಿ ಕೃಷಿ ಇಲಾಖೆಯು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ನಂದಿ ಗ್ರಾಮದಲ್ಲಿ ಶನಿವಾರ (ಡಿ.23) ರಾಜ್ಯ ಮಟ್ಟದ ಯುವ ಕೃಷಿ ಮೇಳ –-2017 ಹಾಗೂ ಕೃಷಿ ವಸ್ತು ಪ್ರದರ್ಶನ ಏರ್ಪಡಿಸಿದೆ. ಕೃಷಿ ವಿಶ್ವವಿದ್ಯಾನಿಲಯ, ತೋಟಗಾರಿಕೆ ಇಲಾಖೆ, ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ಕರ್ನಾಟಕ ಪ್ರದೇಶ ಯುವಕ ರೈತ ಸಮಾಜ, ರೇಷ್ಮೆ ಇಲಾಖೆ, ಪಶು ಸಂಗೋಪನೆ ಇಲಾಖೆ, ಮೀನುಗಾರಿಕೆ ಇಲಾಖೆ ಹಾಗೂ ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಂದಿ ಗ್ರಾಮದ ಭೋಗ ನಂದೀಶ್ವರ ದೇವಸ್ಥಾನದ ಹತ್ತಿರ ನಡೆಯುವ ಈ ಕಾರ್ಯಕ್ರಮದಲ್ಲಿ ಬೆಳಿಗ್ಗೆ 11 ಗಂಟೆಗೆ ಕೃಷಿ ಮೇಳವನ್ನು ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಉದ್ಘಾಟಿಸಲಿದ್ದಾರೆ.

ಕೃಷಿ ವಸ್ತು ಪ್ರದರ್ಶನದ ಮಳಿಗೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಲಿದ್ದಾರೆ. ಶಾಸಕರಾದ ಡಾ.ಕೆ.ಸುಧಾಕರ್, ಎನ್.ಎಚ್.ಶಿವಶಂಕರರೆಡ್ಡಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಚೇರಿ ಸ್ಥಳಾಂತರ

ಚಿಕ್ಕಬಳ್ಳಾಪುರ: ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯ ನವೀಕರಣದ ಕಾರ್ಯ ನಡೆಸಲು ಉದ್ದೇಶಿಸಿರುವ ಕಾರಣಕ್ಕೆ ತಾತ್ಕಾಲಿಕವಾಗಿ ಈ ಕಚೇರಿಯನ್ನು 27ನೇ ವಾರ್ಡ್‌ನ ಹಳೆ ಮೈಸೂರು ಬ್ಯಾಂಕ್ ರಸ್ತೆಯಲ್ಲಿ ಬಾಲಾಜಿ ಚಾಟ್ಸ್ ಎದುರು, ನಂ-.230 ವಿಳಾಸಕ್ಕೆ ಸ್ಥಳಾಂತರಿಸಲಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ: ತಾಲ್ಲೂಕಿನ ರೇಣುಮಾಕಲಹಳ್ಳಿಯಲ್ಲಿರುವ (ಕುಪ್ಪಹಳ್ಳಿ) ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಗೆ 2018-–19ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವಸತಿ ಶಾಲೆಯಲ್ಲಿ ಅಥವಾ ಚಿಕ್ಕಬಳ್ಳಾಪುರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಜನವರಿ 13ರ ಒಳಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಥವಾ ವಸತಿ ಶಾಲೆಯಲ್ಲಿ ಸಲ್ಲಿಸಬೇಕು. ಹೆಚ್ಚಿನ ವಿವರ: 9686907161.

ಜ.27 ರಂದು ಕಸಾಪ ಜಿಲ್ಲಾ ಸಮ್ಮೇಳನ

ಚಿಕ್ಕಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜನವರಿ 27 ಮತ್ತು 28 ರಂದು ಗುಡಿಬಂಡೆಯ ತಾಲ್ಲೂಕು ಕಚೇರಿ ಆವರಣದಲ್ಲಿ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿದೆ.

ಸಮ್ಮೇಳನಾಧ್ಯಕ್ಷರ ಆಯ್ಕೆ, ಲಾಂಛನ ಬಿಡುಗಡೆ, ಗಣ್ಯರ ಆಹ್ವಾನ, ವಿಚಾರ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳ ರೂಪುರೇಷೆ, ಸ್ಮರಣ ಸಂಚಿಕೆ ಸೇರಿದಂತೆ ಸಮ್ಮೇಳನದ ಸಿದ್ಧತೆಗಳು ಭರದಿಂದ ಸಾಗಿವೆ.

ಜಿಲ್ಲಾ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಕೈವಾರ

ಎನ್. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry