6

ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸ

Published:
Updated:

ತರೀಕೆರೆ: ಮುಂಬರುವ ವಿಧಾನಸಭೆ ಚುನಾವಣೆಗೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಲು ಬಯಸಿದ್ದು, ಪಕ್ಷದ ವರಿಷ್ಠರಲ್ಲಿ ಟಿಕೆಟ್‌ಗಾಗಿ ಮನವಿ ಮಾಡಿದ್ದೇನೆ ಎಂದು ಬಿಜೆಪಿ ಮುಖಂಡ ಆರ್.ದೇವಾನಂದ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಜನಸಂಘದಿಂದಲೂ ಕಾರ್ಯ ಕರ್ತನಾಗಿ ದುಡಿದು ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಟದಲ್ಲಿ ಭಾಗವಹಿಸಿದ್ದೇನೆ. ಬಿಜೆಪಿಯ ತಾಲ್ಲೂಕು ಘಟಕ, ಜಿಲ್ಲಾ ಘಟಕಗಳಲ್ಲಿ ಸೇವೆ ಸಲ್ಲಿಸಿದ್ದು, ರಾಮ ಜನ್ಮಭೂಮಿ ಹೋರಾಟದಲ್ಲಿ ಸಕ್ರೀಯವಾಗಿ ಪಾಲ್ಗೊಂಡಿದ್ದೇನೆ. ಎರಡು ಬಾರಿ ಮ್ಯಾಮ್‍ಕೋಸ್ ನಿರ್ದೇಶಕನಾಗಿ, ಜಿಲ್ಲಾ ಪೆಟ್ರೋಲಿಯಂ ಡೀಲರ್ಸ್ ಅಧ್ಯಕ್ಷನಾಗಿ, ರಾಜ್ಯ ಘಟಕದ ಕಾರ್ಯದರ್ಶಿಯಾಗಿ ನಿರ್ವಹಿಸಿದ್ದೇನೆ. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry