5

ದಲಿತ ಹೆಣ್ಣು ಮಗಳ ಅತ್ಯಾಚಾರ, ಕೊಲೆ ಖಂಡನೀಯ: ಈಶ್ವರಪ್ಪ

Published:
Updated:

ಹೊನ್ನಾಳಿ: ವಿಜಯಪುರ ನಗರದ ದಲಿತ ಕುಟುಂಬದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಕೃತ್ಯ ಖಂಡನೀಯ ಎಂದು ಪ್ರಜಾ ಪರಿವರ್ತನಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಡಿ. ಈಶ್ವರಪ್ಪ ಹೇಳಿದರು.

ನಿರ್ಭಯಾ ಪ್ರಕರಣದಲ್ಲಿ ನೀಡಿದ ಗಲ್ಲು ಶಿಕ್ಷೆಯಂತಹ ಕಠಿಣ ಶಿಕ್ಷೆಯನ್ನು ಈ ಆರೋಪಿಗಳಿಗೆ ನೀಡಬೇಕು. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಂತಹ ಘಟನೆಗಳು ರಾಜ್ಯದಲ್ಲಿ ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.

ಈ ಪ್ರಕರಣ ನಡೆದಿರುವ ಬಗ್ಗೆ ರಾಜ್ಯದಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ವಿಜಯಪುರದ ಅಂಬೇಡ್ಕರ್ ಪ್ರತಿಮೆ ಬಳಿ ಕೆಲವು ಸಂಘಟನೆಗಳು ರಾತ್ರಿಯಿಡಿ ಪ್ರತಿಭಟನೆ ಮಾಡಿವೆ ಎಂದು ತಿಳಿಸಿದರು.

‘ಪ್ರಜಾಪರಿವರ್ತನಾ ವೇದಿಕೆ ಹಾಗೂ ಪ್ರಜಾಪರಿವರ್ತನಾ ಪಕ್ಷದಿಂದ ಪಟ್ಟಣದಲ್ಲಿ ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದೇವೆ. ಈ ಪ್ರಕರಣದಲ್ಲಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಅರಕೆರೆ ಕೃಷ್ಣ, ತಾಲ್ಲೂಕು ಅಧ್ಯಕ್ಷ ಕೆ.ಒ. ಹನುಮಂತಪ್ಪ, ಪದಾಧಿಕಾರಿಗಳಾದ ಸಿದ್ದಪ್ಪ, ರುದ್ರೇಶ್, ಅಣ್ಣಪ್ಪ, ದಾನೇಶ್, ನಾಗರಾಜ್, ರಮೇಶ್, ಹನುಮಂತಪ್ಪ, ಶಶಿಕುಮಾರ್ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry