6

ಬಿಜೆಪಿ,ವಿವಿಧ ಸಂಘಟನೆಗಳಿಂದ ಮೆರವಣಿಗೆ

Published:
Updated:

ಬೀದರ್: ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಬಿಜೆಪಿ, ಭೀಮ ಭಾರತ ಏಕತಾ ಮಿಷನ್, ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಹಾಗೂ ಅಂಬೇಡ್ಕರ್ ಸೇನೆ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು.

ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮನವಿ ಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಬೆಲ್ದಾಳೆ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಈಶ್ವರಸಿಂಗ್ ಠಾಕೂರ್, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯಕುಮಾರ ಎಸ್. ಪಾಟೀಲ ಗಾದಗಿ, ಮುಖಂಡರಾದ ರಾಜು ಚಿದ್ರಿ, ಜಗನ್ನಾಥ ಪಾಟೀಲ, ಲುಂಬಿಣಿ ಗೌತಮ, ಮಹೇಶ್ವರ ಸ್ವಾಮಿ, ಸಂಗಮೇಶ ನಾಸಿಗಾರ, ಚಂದ್ರಶೇಖರ ಗಾದಾ, ಶಿವಪುತ್ರ ವೈದ್ಯ, ವೀರೂ ದಿಗ್ವಾಲ್ ಪಾಲ್ಗೊಂಡಿದ್ದರು.

ಅಂಬೇಡ್ಕರ್ ವೃತ್ತದ ಬಳಿ ಸೇರಿದ ಭೀಮ ಆರ್ಮಿ ಭಾರತ ಏಕತಾ ಮಿಷನ್ ಜಿಲ್ಲಾ ಘಟಕದ ಕಾರ್ಯಕರ್ತರು ಘೋಷಣೆ ಕೂಗುತ್ತ ಜಿಲ್ಲಾಧಿಕಾರಿ ಕಚೇರಿಗೆ ಬಂದರು. ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು. ವಿದ್ಯಾರ್ಥಿನಿಯನ್ನು ಕೊಲೆಗೈದ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಿ ಮರಣ ದಂಡನೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.

ಮಿಷನ್ ರಾಜ್ಯ ಘಟಕದ ಉಪಾಧ್ಯಕ್ಷ ರಮೇಶ ಪಾಸ್ವಾನ, ಜಿಲ್ಲಾ ಘಟಕದ ಅಧ್ಯಕ್ಷ ರಾಹುಲ್ ಹಾಲೆಪುರ್ಗಿಕರ್, ಕರಣ ಜಡಗೆ, ಮಿಲಿಂದ್ ಭಾಗವಹಿಸಿದ್ದರು. ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆಯ ಜಿಲ್ಲಾ ಘಟಕದ ಕಾರ್ಯಕರ್ತರು ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗೆ ಮನವಿ ಪತ್ರ ಕಳುಹಿಸಿದರು.

ವಿದ್ಯಾರ್ಥಿನಿಯನ್ನು ಕೊಲೆ ಮಾಡಿದ ಆರೋಪಿಗಳನ್ನು ತಕ್ಷಣ ಸೆರೆ ಹಿಡಿಯಬೇಕು. ಘಟನೆಗೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಹೊಣೆಯಾಗಿಸಿ ಅಮಾನತು ಮಾಡಬೇಕು. ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಭರತ ಕಾಂಬಳೆ, ಉಪಾಧ್ಯಕ್ಷ ಚರಣಜೀತ್ ಆಣದೂರು, ತಾಲ್ಲೂಕು ಘಟಕದ ಅಧ್ಯಕ್ಷ ಗೌರೀಶ್ ಕೊಳಾರ, ಮುಖಂಡರಾದ ಅಭಿಷೇಕ ಡಿಸೋಜಾ, ಪ್ರದೀಪ ಸಾಗರ, ಸಂತೋಷ ನಿಟ್ಟೂರಕರ್, ಸೂರಜ್ ಚಿದ್ರಿ, ಸುರೇಶ ಮದನಾ, ರಮೇಶ ಢೋಣೆ ಭಾಗವಹಿಸಿದ್ದರು.

ಅಂಬೇಡ್ಕರ್ ಸೇನೆ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ರವಾನಿಸಿದರು.

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ವಿಷ್ಣುವರ್ಧನ್ ವಾಲ್ದೊಡ್ಡಿ, ತಾಲ್ಲೂಕು ಅಧ್ಯಕ್ಷ ಆಕಾಶ ಜನವಾಡಕರ್, ವಿಶಾಲ ಹೊನ್ನಾ, ಅವಿನಾಶ ಪಾತರಪಳ್ಳಿ, ಅಜಯ ಬೆಲ್ದಾರ್, ಸೂರಜ್ ಚಿದ್ರಿ, ಗೌತಮ ಕಾಂಬಳೆ, ಓಂಕಾರ ತಡಪಳ್ಳಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry