7

ಧಾರವಾಡ: ತಾಲ್ಲೂಕು ಪಂಚಾಯ್ತಿ ಸದಸ್ಯ ಸುಭಾಷ ನಿಂಗಪ್ಪ ದೇಸಾಯಿ ನಿಧನ

Published:
Updated:
ಧಾರವಾಡ: ತಾಲ್ಲೂಕು ಪಂಚಾಯ್ತಿ ಸದಸ್ಯ ಸುಭಾಷ ನಿಂಗಪ್ಪ ದೇಸಾಯಿ ನಿಧನ

ಧಾರವಾಡ: ತಾಲೂಕಿನ ಅಮ್ಮಿನಭಾವಿ ಗ್ರಾಮದ ನಿವಾಸಿ ಹಾಗೂ ತಾಲ್ಲೂಕು ಪಂಚಾಯ್ತಿ ಸದಸ್ಯ ಸುಭಾಷ ನಿಂಗಪ್ಪ ದೇಸಾಯಿ (60) ಅವರು ಭಾನುವಾರ ಅನಾರೋಗ್ಯದಿಂದ ನಿಧನರಾದರು. 

ಅವರಿಗೆ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ.

ಇಂದು ಮಧ್ಯಾಹ್ನ 2ಕ್ಕೆ ಗ್ರಾಮದ ರುದ್ರಭೂಮಿಯಲ್ಲಿ ಜೈನ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.

ಸುಭಾಷ ಅವರು ಧಾರವಾಡ ತಾಲೂಕಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. ಒಂದು ಬಾರಿಗೆ ಮಂಡಳ ಪಂಚಾಯ್ತಿ ಸದಸ್ಯರಾಗಿ, ಒಂದು ಅವಧಿಗೆ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿ ಆಯ್ಕೆಯಾಗಿದ್ದರು.

ಪ್ರಸ್ತುತ ಧಾರವಾಡ ತಾಲ್ಲೂಕು ಪಂಚಾಯ್ತಿ ಸದಸ್ಯರಾಗಿದ್ದರು. ಸತತ ಮೂರು ಬಾರಿ ಅಮ್ಮಿನಭಾವಿ ಕ್ಷೇತ್ರವನ್ನು ಪ್ರತಿನಿಧಿಸಿ ಮೂರೂ ಭಾರಿಗೆ ತಾಲ್ಲೂಕು ಪಂಚಾಯ್ತಿ ಸದಸ್ಯರಾಗಿ ನೇಮಕಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry