7

‘ರಕ್ತದಾನ ಮಾಡಿ ಜೀವ ಉಳಿಸಿ’

Published:
Updated:

ಗಜೇಂದ್ರಗಡ: ರಕ್ತದ ಕಣ ಕಣವೂ ಜೀವನದ ಕುರುಹು. ರಕ್ತ ದಾನ ಮಾಡಿದರೆ ಮತ್ತೊಬ್ಬರ ಜೀವ ಉಳಿಸಬಹುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಅಕ್ಕ ಸೇವಾ ಟ್ರಸ್ಟ್ ವತಿಯಿಂದ ರೈತ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ನಾವು ವೈಜ್ಞಾನಿಕವಾಗಿ ಎಷ್ಟೇ ಮುಂದುವರಿದಿದ್ದರು ಕೃತಕ ರಕ್ತ ತಯಾರಿಸಲು ಸಾಧ್ಯವಾಗಿಲ್ಲ. ಅಪಘಾತ, ಇನ್ನಿತರ ತುರ್ತು ಪರಿಸ್ಥಿತಿಯಲ್ಲಿ ರಕ್ತದ ಅವಶ್ಯಕತೆ ಇರುವ ರೋಗಿಗಳಿಗೆ ಸಂಗ್ರಹಿತ ರಕ್ತ ಉಪಯುಕ್ತವಾಗುತ್ತದೆ. ಇಂತಹ ಶಿಬಿರಗಳನ್ನು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಆಯೋಜಿಸಬೇಕು ಎಂದರು.

ಡಾ.ಪಾರ್ವತಿಬಾಯಿ ಚವಡಿ ಮಾತನಾಡಿ, ನಮ್ಮ ದೇಹದಲ್ಲಿ ಉತ್ಪತ್ತಿಯಾದ ರಕ್ತದ ಕಣ 120 ದಿನಗಳ ನಂತರ ಅಳಿದು ಹೊಸ ರಕ್ತ ಕಣ ಉತ್ಪತ್ತಿಯಾಗುತ್ತದೆ. ಹೀಗಾಗಿ, ರಕ್ತವನ್ನು ದಾನ ಮಾಡಿದರೆ ಇನ್ನೊಬ್ಬರ ಜೀವ ಉಳಿಸುವ ಜತೆ ಆರೋಗ್ಯವಂತರಾಗಿ ಬಾಳಬಹುದು ಎಂದರು. ಶಿಬಿರದಲ್ಲಿ 60ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು. ಡಾ.ಬಿ.ವಿ.ಕಂಬ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry