7

‘ಕಾಂಗ್ರೆಸ್‌ನಿಂದ ಟಿಕೆಟ್‌ ಸಿಗುವುದು ಖಚಿತ’

Published:
Updated:

ಶ್ರೀರಂಗಪಟ್ಟಣ:  2018ರ ಚುನಾವಣಾ ಸಂದರ್ಭದಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಖಚಿತ ಎಂದು ಜೆಡಿಎಸ್‌ ಬಂಡಾಯ ಶಾಸಕ ರಮೇಶ ಬಂಡಿಸಿದ್ದೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕಿನ ಕಾವೇರಿ ಬೋರೇದೇವರ ದೇವಾಲಯ ಸಮುದಾಯ ಭವನದಲ್ಲಿ ಭಾನುವಾರ ನಡೆದ ಮೂಲ ಕಾಂಗ್ರೆಸಿಗರು ಹಾಗೂ ಅಂಬರೀಷ್ ಅಭಿಮಾನಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ ಟಿಕೆಟ್‌ ನೀಡುವುದಾಗಿ ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಜನವರಿ ಅಂತ್ಯದ ವೇಳೆಗೆ ಏಳು ಜನ ಜೆಡಿಎಸ್‌ ಬಂಡಾಯ ಶಾಸಕರು ಕಾಂಗ್ರೆಸ್‌ ಸೇರಲಿದ್ದೇವೆ. ಕ್ಷೇತ್ರದಲ್ಲಿ ನಮ್ಮ ಕುಟುಂಬದ ಜೊತೆ ನಿಕಟ ಸಂಪರ್ಕ ಹೊಂದಿರುವ ಹಿತೈಶಿಗಳು ಮಾತ್ರವಲ್ಲದೇ ಮೂಲ ಕಾಂಗ್ರೆಸ್‌ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ಹೆದಿರಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರನ್ನು ಈಗಾಗಲೇ ಭೇಟಿ ಮಾಡುತ್ತಿದ್ದು ಅವರು ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ ಎಂದರು. ಅಂಬರೀಷ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ಎ.ಸಿ.ಮಂಜುನಾಥ್‌ ಮಾತನಾಡಿ ಕಳೆದ 25 ವರ್ಷಗಳಿಂದ ಕಾಂಗ್ರೆಸ್‌ ಪಕ್ಷವನ್ನು ಸಂಘಟಿಸುತ್ತಿದ್ದೇನೆ. 2018 ರ ಚುನಾವಣೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಅಂಬರೀಷ್‌ ಅಭಿಮಾನಿಗಳು ಸಂಪೂರ್ಣವಾಗಿ ರಮೇಶ ಬಂಡಿಸಿದ್ದೇಗೌಡ ಅವರನ್ನು ಬೆಂಬಲಿಸಲಿದ್ದಾರೆ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಸಂತೋಷ್‌. ಟಿಎಪಿಸಿಎಂಎಸ್‌ ನಿರ್ದೇಶಕ ಶಿವಯ್ಯ, ಅರಕೆರೆ ವಿಎಸ್‌ಎಸ್‌ಎಲ್‌ ಅಧ್ಯಕ್ಷ ಲೋಕೇಶ್‌, ನಿರ್ದೇಶಕ ದೇವರಾಜು, ಶಶಾಂಕ್‌ಗೌಡ, ಎಪಿಎಂಸಿ ನಿರ್ದೇಶಕ ಶಿವಣ್ಣ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry