ಮುಖ್ಯರಸ್ತೆಯ ಅಲ್ಲಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ಸಂಚರಿಸಲಾಗದೇ ಪರದಾಡುತ್ತಿರುವ ದೃಶ್ಯ ಕಂಡು ಬರುತ್ತಿದೆ. ಭದ್ರಕಾಳಿ ದೇವಾಲಯದಿಂದ ಗಂಜಿಗದ್ದೆವರೆಗೂ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ರಸ್ತೆಯ ಬದಿಯಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿರುವುದರಿಂದ ಜನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಮುಖ್ಯ ದೇವಾಲಯಗಳು ಪ್ರವಾಸಿಗರ ಸರತಿ ಸಾಲಿನಿಂದ ತುಂಬಿದೆ.