6

ಕಲ್ಲಡ್ಕದಲ್ಲಿ ಕೊಲೆ ಆರೋಪಿ ಮೇಲೆ ತಲವಾರಿನಿಂದ ದಾಳಿ

Published:
Updated:
ಕಲ್ಲಡ್ಕದಲ್ಲಿ ಕೊಲೆ ಆರೋಪಿ ಮೇಲೆ ತಲವಾರಿನಿಂದ ದಾಳಿ

ಮಂಗಳೂರು: ಕರೋಪಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಆರೋಪಿ ಕೇಶವ ಎಂಬಾತನ ಮೇಲೆ ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಪಟ್ಟಣದಲ್ಲಿ ಮಂಗಳವಾರ ಸಂಜೆ ಹಲ್ಲೆ ನಡೆಸಲಾಗಿದೆ.

ಬೈಕ್‌ನಲ್ಲಿ ಬಂದ ಇಬ್ಬರು ಹೆಲ್ಮೆಟ್ ಧಾರಿ ವ್ಯಕ್ತಿಗಳು ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಕರಣದ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಸಿ.ಎಚ್.ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಕೇಶವನ ಹಣೆಯಲ್ಲಿ ಆರು ಇಂಚು ಉದ್ದ ಹಾಗೂ ಅರ್ಧ ಇಂಚು ಆಳದ‌ ಗಾಯವಾಗಿದೆ. ಹೊಲಿಗೆ ಹಾಕಿದ್ದು, ಗಾಯಾಳು ಸುಧಾರಿಸಿಕೊಳ್ಳುತ್ತಿದ್ದಾನೆ ಎಂದು ಸುಧೀರ್ ಕುಮಾರ್ ಮಾಹಿತಿ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry