6

ಮುನಿಯಪ್ಪ, ಖರ್ಗೆ ಸಿ.ಎಂ ಅಭ್ಯರ್ಥಿಯಾದರೆ ಬೆಂಬಲ

Published:
Updated:
ಮುನಿಯಪ್ಪ, ಖರ್ಗೆ ಸಿ.ಎಂ ಅಭ್ಯರ್ಥಿಯಾದರೆ ಬೆಂಬಲ

ಬೀದರ್‌: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಮುಖ್ಯಮಂತ್ರಿ ಸ್ಥಾನವನ್ನು ಸಂಸದರಾದ ಕೆ.ಎಚ್.ಮುನಿಯಪ್ಪ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊಡುವುದಾದರೆ ನಮ್ಮ ಪಕ್ಷವು ಬೇಷರತ್ ಬೆಂಬಲ ನೀಡಲಿದೆ’ ಎಂದು ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ(ಆರ್‌ಪಿಐ) ರಾಷ್ಟ್ರೀಯ ಅಧ್ಯಕ್ಷ ಪ್ರಕಾಶ ಅಂಬೇಡ್ಕರ್‌ ಹೇಳಿದರು.

‘ಕಾಂಗ್ರೆಸ್‌ ಪಕ್ಷವು ದಲಿತರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸದಿದ್ದರೆ ನಮ್ಮ ಪಕ್ಷವು ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ’ ಎಂದು ಮಂಗಳವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.

‘ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದಿದೆ. ಆದರೆ, ಅಂಕಿಅಂಶಗಳನ್ನು ಅವಲೋಕಿಸಿದರೆ ಆ ಪಕ್ಷಕ್ಕೆ ಕಡಿಮೆ ಸ್ಥಾನಗಳು ಬಂದಿವೆ. ಮೋದಿ ಅಲೆಯ ಅಬ್ಬರ ಕಡಿಮೆ ಆಗಿದೆ. 2018ರ ಕರ್ನಾಟಕ ವಿಧಾನಸಭಾ ಚುನಾವಣೆಯು ಮುಂಬರುವ ರಾಷ್ಟ್ರ ರಾಜಕಾರಣಕ್ಕೆ ದಿಕ್ಸೂಚಿ ಆಗಲಿದೆ. 2019ರ ಲೋಕಸಭೆ ಚುನಾವಣೆಗೆ ಮುನ್ನುಡಿಯನ್ನೂ ಬರೆಯಲಿದೆ’ ಎಂದು ಅಭಿಪ್ರಾಯಪಟ್ಟರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry