‘ಕಾಂಗ್ರೆಸ್ ಸುಳ್ಳು ಭರವಸೆ ನೀಡಿಲ್ಲ’

7

‘ಕಾಂಗ್ರೆಸ್ ಸುಳ್ಳು ಭರವಸೆ ನೀಡಿಲ್ಲ’

Published:
Updated:

ಡಂಬಳ: ‘ಕಾಂಗ್ರೆಸ್‌ ಪಕ್ಷ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ಈ ಹಿಂದೆ ಚುನಾವಣೆಯ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಅಭಿವೃದ್ಧಿ ಕಾರ್ಯಗಳೇ ಪಕ್ಷದ ಕೈ ಹಿಡಿಯುತ್ತವೆ’ ಎಂದು ಶಾಸಕ ಜಿ.ಎಸ್.ಪಾಟೀಲ ಹೇಳಿದರು.

ಹೋಬಳಿಯ ದಿಂಡೂರ ಗ್ರಾಮದಲ್ಲಿ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದ ಕಾರ್ಯಕರ್ತರನ್ನು ಸನ್ಮಾನಿಸಿ, ಅವರು ಮಾತನಾಡಿದರು. ‘ರಾಜ್ಯ ಸರ್ಕಾರ ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಆದರೆ, ಬಿಜೆಪಿಯವರು ಪರಿವರ್ತನೆ ಯಾತ್ರೆಯಲ್ಲಿ ಇಲ್ಲ ಸಲ್ಲದ ಆರೋಪಗಳನ್ನು ಮಾಡುವುದು ಸರಿಅಲ್ಲ’ ಎಂದರು.

ಮಹಾಂತೇಶ ಲಮಾಣಿ, ತೇಜಪ್ಪ ಲಮಾಣಿ, ಮಲ್ಲೇಶ ಲಮಾಣಿ, ರಮೇಶ ನಾಯಕ, ಆನಂದ ಲಮಾಣಿ, ತಾವರೆಪ್ಪ ಲಮಾಣಿ, ಸೋಮಲೆಪ್ಪ ಲಮಾಣಿ, ಡಾಕಪ್ಪ ಲಮಾಣಿ, ಗಂಗಪ್ಪ ಲಮಾಣಿ, ವಿಠ್ಠಲ ಲಮಾಣಿ ಸೇರಿದಂತೆ 10ಕ್ಕೂ ಹೆಚ್ಚು ಪಕ್ಷಕ್ಕೆ ಸೇರ್ಪಡೆಯಾದರು. ವಕೀಲ ವಿ.ಆರ್.ಗುಡಿಸಾಗರ, ಗೋಣಿ ಬಸಪ್ಪ ಕೊರ್ಲಹಳ್ಳಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry