3

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ

Published:
Updated:
ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ

ರೋಣ: ವಿಜಯಪುರದ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ದುರುಳರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಪಟ್ಟಣದ ಅಂಜುಮನ್ ಎ ಇಸ್ಲಾಂ ಕಮಿಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಉಪ ತಹಶೀಲ್ದಾರ್ ಎಸ್.ಎನ್.ಹಿರೇಮಠ ಅವರಿಗೆ ಮನವಿ ಸಲ್ಲಿಸಲಾಯಿತು.

ಪುರಸಭೆ ಸದಸ್ಯ ಶಫೀಕ್ ಮೂಗನೂರ ಮಾತನಾಡಿ, ದೇಶದಾದ್ಯಂತ ವಿದ್ಯಾರ್ಥಿನಿಯರು, ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ. ವಿಜಯಪುರದ ದಲಿತ ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಐವರು ಯುವಕರು ಆಕೆಯ ಮೇಲೆ ಸಾಮೂಹಿಕ

ಅತ್ಯಾಚಾರ ನಡೆಸಿ, ಕೊಲೆ ಮಾಡಿರುವುದು ಹೇಯ ಕೃತ್ಯ. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದರು.

ಅಂಜುಮನ್ ಎ ಇಸ್ಲಾಂ ಕಮೀಟಿ ಅಧ್ಯಕ್ಷ ಬಾವಾಸಾಬ್ ಬೇಟಗೇರಿ, ಯುಸೂಫ್ ಇಟಗಿ ಮಾತನಾಡಿದರು. ಮಂಜುನಾಥ ಹಾಳಕೇರಿ, ಖಾದಿರಸಾಬ್

ಸಂಕನೂರ, ಹನುಮಂತ ಚಲುವಾದಿ, ಅಸ್ಲಂ ಕೊಪ್ಪಳ, ಮೌನೇಶ ಹಾದಿಮನಿ, ಬಸವರಾಜ ಕಾಳೆ, ಎ.ಎ.ಮುಲ್ಲಾ, ಎನ್.ಎ.ಕೊಲಂಕರ್, ಇಮಾಂಸಾಬ್ ಮೂಲಿಮನಿ, ಹಸನ್‌ಸಾಬ್ ಮಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry