7

30ರಿಂದ ಜೈನ ಸಾಹಿತ್ಯ ಸಮ್ಮೇಳನ

Published:
Updated:

ಶ್ರವಣಬೆಳಗೊಳ: ಬಾಹುಬಲಿ ಮಹಾಮಸ್ತಕಾಭಿಷೇಕ ಅಂಗವಾಗಿ ಡಿ. 30 ಮತ್ತು 31 ರಂದು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ಗೊಮ್ಮಟನಗರದಲ್ಲಿ ರಾಜ್ಯ ಮಟ್ಟದ ಕನ್ನಡ ಜೈನ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ.

ಪಂಪ ಮಹಾಕವಿ ಸಭಾ ಮಂಟಪದಲ್ಲಿ ಬೆಳಗಾವಿಯ ನಿವೃತ್ತ ನ್ಯಾಯಾಧೀಶ ಹಾಗೂ ಸಾಹಿತಿ ಡಾ. ಜಿನದತ್ತ ದೇಸಾಯಿ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದು, ಡಿ. 29ರ ಸಂಜೆ 5 ಗಂಟೆಗೆ ಚಾವುಂಡರಾಯ ಸಭಾ ಮಂಟಪದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಪ್ರಾರಂಭಗೊಂಡು, ಪಂಪ ಮಹಾಕವಿ ಸಭಾ ಮಂಟಪದ ವೇದಿಕೆಗೆ ಆಗಮಿಸಲಿದೆ.

30 ರ ಬೆಳಗ್ಗೆ 10.35ಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸಮ್ಮೇಳನ ಉದ್ಘಾಟಿಸಲಿದ್ದು, ಮಹಾಮಸ್ತಕಾಭಿಷೇಕ ಮಹೋತ್ಸವ ಸಮಿತಿ ಸಹ ಅಧ್ಯಕ್ಷ ಕೆ.ಅಭಯಚಂದ್ರ ಭಾಗವಹಿಸುವರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ್ ಪುಸ್ತಕ ಪ್ರದರ್ಶನ ಸಮಾರಂಭ ಉದ್ಘಾಟಿಸಲಿದ್ದು, ದೂರದರ್ಶನ ಕೇಂದ್ರದ ಉಪ ನಿರ್ದೇಶಕ ಚಂದ್ರಶೇಖರ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.

ಶಾಸಕ ಸಿ.ಎನ್.ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ರಮೇಶ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಹಾಲಕ್ಷ್ಮಿ ಶಿವರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಾ ಪ್ರಭಾಕರ್, ದಿಗಂಬರ ಜೈನ ಸಮಾಜದ ಅಧ್ಯಕ್ಷ ಜಿ.ಪಿ.ಪದ್ಮಕುಮಾರ್, ಪೂರ್ಣಿಮಾ ಅನಂತ ಪದ್ಮನಾಭ್ ಭಾಗವಹಿಸುವರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry