7

ಮಹದಾಯಿ; ಪ್ರಧಾನಿ ಮಧ್ಯ ಪ್ರವೇಶಕ್ಕೆ ಆಗ್ರಹ

Published:
Updated:

ಹಾಸನ : ಮಹದಾಯಿ ಕುಡಿಯುವ ನೀರಿನ ವಿಚಾರವಾಗಿ ಪ್ರಧಾನಿ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಶಾಸಕ ಎಚ್.ಡಿ.ರೇವಣ್ಣ ಒತ್ತಾಯಿಸಿದರು ’ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಗೆ ಪತ್ರ ಬರೆದು ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಬೇಕು. ಮಹದಾಯಿ ವಿಚಾರದಲ್ಲಿ ಪ್ರಧಾನಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿ ಅರ್ಧ ಗಂಟೆಯಲ್ಲಿ ಸಮಸ್ಯೆ ಇತ್ಯರ್ಥಗೊಳಿಸಬಹುದು. ಜತೆಗೆ ಕಾವೇರಿ ಸಮಸ್ಯೆಯನ್ನೂ ಸೇರಿಸಿಕೊಳ್ಳಲಿ. ಆದರೆ ರಾಷ್ಟ್ರೀಯ ಪಕ್ಷಗಳಿಗೆ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇಲ್ಲವಾಗಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಎರಡು ರಾಷ್ಟ್ರೀಯ ಪಕ್ಷಗಳು ಪರಸ್ಪರ ಬೊಟ್ಟು ಮಾಡುವ ಮೂಲಕ ಜನ ಸಾಮಾನ್ಯರನ್ನು ನಿರ್ಲಕ್ಷಿಸುತ್ತಿವೆ. ಕಾಂಗ್ರೆಸ್‌, ಬಿಜೆಪಿ ಮನೆಗೆ ಹೋಗುವವರೆಗೂ ಯಾವುದೇ ಸಮಸ್ಯೆ ಇತ್ಯರ್ಥವಾಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಜನರೇ ಇವರಿಗೆ ಬುದ್ಧಿ ಕಲಿಸಲಿದ್ದಾರೆ’ ಎಂದರು.

‘ದೇವೇಗೌಡರು ಪ್ರಧಾನ ಮಂತ್ರಿಯಾಗಿದ್ದಾಗ ಸಾಕಷ್ಟು ಸಮಸ್ಯೆ ಬಗೆಹರಿಸಿಲ್ಲವೇ ? ಹಾಗಾಗಿ ಪ್ರಧಾನಿ ಮಧ್ಯಪ್ರವೇಶಿಸಿದರೇ ಅರ್ಧ ಗಂಟೆಯಲ್ಲಿ ಸಮಸ್ಯೆ ಇತ್ಯರ್ಥವಾಗಲಿದೆ. ಇದನ್ನು ಬಿಟ್ಟು ಕೇವಲ ಯಡಿಯೂರಪ್ಪಗೆ ಪತ್ರ ಬರೆದರೆ ಪ್ರಯೋಜನವಿಲ್ಲ’ ಎಂ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry