7

‘ಮುಖ್ಯಮಂತ್ರಿ ಮನೆಗೆ ಚಲೋ’ ನಾಳೆ

Published:
Updated:

ಹುಬ್ಬಳ್ಳಿ: ಸಾರ್ವಜನಿಕರೊಂದಿಗೆ ಚರ್ಚಿಸದೇ ತಯಾರಿಸಿರುವ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಡಿ. 29ರಂದು (ಶುಕ್ರವಾರ) ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿಗಳ ಏಕತಾ ಸಮಾವೇಶ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಂಜಾರ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಪಾಂಡುರಂಗ ಪಮ್ಮಾರ ಅವರು ‘ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಸದಾಶಿವ ಆಯೋಗ ವರದಿ ತಯಾರಿಸಲಾಗಿದೆ. ನಮ್ಮ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲದ ವರದಿ ನಮಗೆ ಬೇಕಿಲ್ಲ’ ಎಂದು ಆಗ್ರಹಿಸಿದರು.

‘ಇಷ್ಟೆಲ್ಲಾ ಸಮಸ್ಯೆಗಳು ಇದ್ದರೂ ಈ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ಬೆಂಗಳೂರು ಚಲೋ ಹಮ್ಮಿಕೊಂಡಿದ್ದೇವೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry