7
ಗಜೇಂದ್ರಗಡ: ಕಿತ್ತೂರ ಚೆನ್ನಮ್ಮನ 194ನೇ ವಿಜಯೋತ್ಸವ

ಪಂಚಮಸಾಲಿ ಮಹಿಳೆಯರ ಸಮಾವೇಶ ನಾಳೆ

Published:
Updated:

ಬಾಗಲಕೋಟೆ: ವೀರರಾಣಿ ಕಿತ್ತೂರ ಚೆನ್ನಮ್ಮನ 194ನೇ ವಿಜಯೋತ್ಸವ ಹಾಗೂ ರಾಜ್ಯಮಟ್ಟದ ಪಂಚಮಸಾಲಿ ಮಹಿಳಾ ಸಮಾವೇಶ ಡಿ. 29 ರಂದು ಗದಗ ಜಿಲ್ಲೆಯೆ ಗಜೇಂದ್ರಗಡದಲ್ಲಿ ನಡೆಯಲಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು

ಗಜೇಂದ್ರಗಡದ ಎಪಿಎಂಸಿ ಎದುರಿಗೆ ಬೆಳಿಗ್ಗೆ 8 ಗಂಟೆಗೆ ಸಮಾರಂಭ ಆರಂಭವಾಗಲಿದೆ ಎಂದು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಮಾವೇಶದ ಅಧ್ಯಕ್ಷತೆಯನ್ನು ಗಜೇಂದ್ರಗಡದ ಸ್ನೇಹಾ ಮಹಿಳಾ ಮಂಡಲದ ಗೌರವ ಅಧ್ಯಕ್ಷೆ ಸಂಯುಕ್ತಾ ಕಳಕಪ್ಪ ಬಂಡಿ ವಹಿಸಲಿದ್ದಾರೆ. ಬಾಗಲಕೋಟೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಮಹಿಳಾ ಸಮಾವೇಶ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಲಕ್ಷ್ಮೀ ಹೆಬ್ಬಾಳಕರ್ ಮುಂತಾದವರು ಭಾಗವಹಿಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry