7

ಅನಂತಕುಮಾರ್‌ ಹೆಗಡೆ ವಜಾಕ್ಕೆ ಆಗ್ರಹ

Published:
Updated:

ದಾವಣಗೆರೆ: ‘ಸಂವಿಧಾನ ಬದಲಾಯಿಸುತ್ತೇವೆ’ ಎಂದು ಹೇಳಿಕೆ ನೀಡಿರುವ ಅನಂತಕುಮಾರ್‌ ಹೆಗಡೆ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ತೆಗೆದು ಹಾಕಬೇಕು ಎಂದು ಆಗ್ರಹಿಸಿ, ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಹೆಗಡೆ ಅವರು, ‘ಅಪ್ಪ ಅಮ್ಮನ ಗುರುತು ಇಲ್ಲದಿರುವವರು ಜಾತ್ಯತೀತರು ಎಂದು ಕರೆಸಿಕೊಳ್ಳುತ್ತಿದ್ದಾರೆ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಅನಂತ್‌ ಕುಮಾರ್‌ ಹೆಗಡೆ ಕೂಡಲೇ ದೇಶದ ನಾಗರಿಕರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ವಿಜಯಪುರದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ, ಅವರನ್ನು ಗಲ್ಲಿಗೇರಿಸಬೇಕು. ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಸರ್ಕಾರ ₹ 25 ಲಕ್ಷ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಒಕ್ಕೂಟದ ರಾಜ್ಯ ಸಂಚಾಲಕ ಸಿ.ಹುಚ್ಚಂಗಿ ಪ್ರಸಾದ್‌, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೆಗ್ಗೆರೆ ರಂಗಪ್ಪ, ಗುಮ್ಮನೂರು ರಾಮಚಂದ್ರಪ್ಪ, ಪರಶುರಾಮ, ಕೊಡಗನೂರು ಲಕ್ಷ್ಮಣ, ಅಳಗವಾಡಿ ನಿಂಗರಾಜ್, ಅಳಗವಾಡಿ ಬಾಬು, ರವಿ ಹಾಗೂ ಒಕ್ಕೂಟದ ಕಾರ್ಯಕರ್ತರೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry