ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಿಪಿಎಂ ಜನಪರ ಪಕ್ಷ’

Last Updated 28 ಡಿಸೆಂಬರ್ 2017, 8:41 IST
ಅಕ್ಷರ ಗಾತ್ರ

ಗಜೇಂದ್ರಗಡ: ಸಿಪಿಎಂ ಸಾರ್ವರ್ತಿಕ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಾಗದೇ ಇರಬಹುದು. ಆದರೆ, ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಪಕ್ಷ ನಿರಂತರ ಹೋರಾಟ ಮಾಡುತ್ತಿದೆ ಎಂದು ಪಕ್ಷದ ಮುಖಂಡ ನಿತ್ಯಾನಂದ ಸ್ವಾಮಿ ಹೇಳಿದರು.

ಪಟ್ಟಣದ ರೋಣ ರಸ್ತೆಯಲ್ಲಿರುವ ಸೇವಾಲಾಲ ಕಲ್ಯಾಣಮಂಟಪದಲ್ಲಿ ಮಂಗಳವಾರ ನಡೆದ ಸಿಪಿಎಂ ಸಮ್ಮೇಳನದಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಜಾತಿವಾದಿಗಳು ಹಾಗೂ ಬಂಡವಾಳಶಾಹಿ ಶಕ್ತಿಗಳು ನಮ್ಮ ಪಕ್ಷದ ವಿರುದ್ಧ ನಿರಂತರ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ದೂರಿದರು.

ಶಾಂತಿ, ಸೌಹಾರ್ದಕ್ಕೆ ಭಂಗ ತರುವ ಹೇಳಿಕೆ ನೀಡುತ್ತಿರುವ ಬಿಜೆಪಿ ಸಂಸದರ ವಿರುದ್ಧ ಸಮ್ಮೇಳನದಲ್ಲಿ ಖಂಡನಾ ನಿರ್ಣಯ ಮಂಡಿಸಲಾಯಿತು.

ಪಕ್ಷದ ನಿರ್ಗಮಿತ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎನ್. ಸೊಪ್ಪಿನ ಮಾತನಾಡಿದರು.

ಸಮ್ಮೇಳನದಲ್ಲಿ ಕೃಷ್ಣಾ, ಮಲಪ್ರಭಾ ಮತ್ತು ಸಿಂಗಟಾಲೂರು ಏತ ನೀರಾವರಿ ಯೋಜನೆಗಳನ್ನು ನಿಗದಿತ ಕಾಲಮಿತಿಯಲ್ಲಿ ಜಾರಿಗೊಳಿಸಬೇಕು, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ ಮಾಡಬೇಕು ಎಂಬ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಆರ್.ಎಚ್.ಆಯಿ, ಬಿ.ಎನ್.ಪೂಜಾರ, ಬಿ.ಐ.ಈಳಗೇರ, ಎಂ.ಎಸ್.ಹಡಪದ, ಮಾರುತಿ ಚಿಟಗಿ, ಬಸವರಾಜ ಮಂತೂರ, ಮಹೇಶ ಹಿರೇಮಠ, ಬಸವರಾಜ ಪೂಜಾರ, ಪೀರು ರಾಠೋಡ, ಫಯಾಜ್ ತೋಟದ, ಬಾಲು ರಾಠೋಡ, ವಿನಾಯಕ ಕುರಬರ, ಮೈಲಾರಪ್ಪ ಮಾದರ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT