7

‘ಸಿಎಂ ಕೊಟ್ಟ ಮಾತು ಉಳಿಸಿಕೊಳ್ಳಲಿ’

Published:
Updated:

ಹಾವೇರಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ಯಾಡಗಿ ವಿಧಾನಸಭೆ ಕ್ಷೇತ್ರದ ಟಿಕೆಟ್‌ ನೀಡುವ ವಿಷಯದಲ್ಲಿ, ಈ ಮೊದಲು ನನಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲಿ’ ಎಂದು ಮುಖಂಡ ಎಸ್‌.ಆರ್‌.ಪಾಟೀಲ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಹಿಂದಿನ ಚುನಾವಣೆಯಲ್ಲಿ ಶಾಸಕ ಬಸವರಾಜ ಶಿವಣ್ಣನವರ ಅವರಿಗೆ ಅವಕಾಶ ಕೊಟ್ಟಿದ್ದು, ಮುಂದೆ ಚುನಾವಣೆಯಲ್ಲಿ ನನಗೆ ಅವಕಾಶ ನೀಡುವುದಾಗಿ ಎಂದು ಭರವಸೆ ಕೊಟ್ಟಿದ್ದರು. ಆದರೆ, ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಣ್ಣನವರನ್ನೇ ಮತ್ತೆ ಅಭ್ಯರ್ಥಿ ಎಂದು ಘೋಷಿಸಿದ್ದು ಮನಸಿಗೆ ನೋವು ತಂದಿದೆ’ ಎಂದರು.

‘ನಾನು ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸುಮಾರು ನಾಲ್ಕು ದಶಕಗಳಿಂದ ದುಡಿಯುತ್ತಿದ್ದೇನೆ. ಅಷ್ಟೇ ಅಲ್ಲದೇ, ಮೂರು ಬಾರಿ ಪುರಸಭೆ ಅಧ್ಯಕ್ಷನಾಗಿ, ಹಾಗೂ ಪಕ್ಷದ ಹಲವು ಹುದ್ದೆಗಳನ್ನು ನಿಭಾಯಿಸಿದ್ದೇನೆ’ ಎಂದರು.

‘ಬ್ಯಾಡಗಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 40 ವರ್ಷಗಳಿಂದ ಸ್ಥಳೀಯರಿಗೆ ಅವಕಾಗಳನ್ನು ನೀಡಿಲ್ಲ. ಆದ್ದರಿಂದ, ಈ ಬಾರಿ ಅಭ್ಯರ್ಥಿ ಎಂದು ಘೊಷಿಸಬೇಕು’ ಎಂದರು.

ನಾಗಣ್ಣ ಬಸಣಕಾರ, ಬಸವರಾಜ ಚಿನ್ನಗೌಡ್ರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry