7

ಭಾರತದ ಹೇಳಿಕೆ ತಳ್ಳಿ ಹಾಕಿದ ಪಾಕ್‌

Published:
Updated:

ಇಸ್ಲಾಮಾಬಾದ್‌: ಭಾರತೀಯ ಸೇನೆ ಇತ್ತೀಚೆಗೆ ಗಡಿ ನಿಯಂತ್ರಣ ರೇಖೆ ದಾಟಿ ಕಾರ್ಯಾಚರಣೆ ನಡೆಸಿದ ವರದಿಗಳನ್ನು ಪಾಕಿಸ್ತಾನ ಸೇನೆ ತಳ್ಳಿ ಹಾಕಿದೆ.

ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನದ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಸೋಮವಾರ ರಾತ್ರಿ ಗಡಿ ನಿಯಂತ್ರಣ ರೇಖೆ ದಾಟಿ ಮುನ್ನುಗ್ಗಿ ಮೂವರು ಪಾಕಿಸ್ತಾನಿ ಯೋಧರನ್ನು ಹತ್ಯೆ ಮಾಡಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸೇನೆಯ ವಕ್ತಾರ ಮೇಜರ್‌ ಜನರಲ್‌ ಅಸೀಫ್‌ ಘಪೂರ್‌, ‘ಭಾರತ ಸುಳ್ಳು ಹೇಳಿಕೆ ನೀಡುತ್ತಿದೆ. ಕಾಶ್ಮೀರ ವಿಷಯದ ಬಗೆಗಿನ ಗಮನವನ್ನು ಬೇರೆಡೆ ಸೆಳೆಯಲು ಈ ರೀತಿ ತಂತ್ರ ರೂಪಿಸಲಾಗುತ್ತಿದೆ. ಕಳೆದ ವರ್ಷ ನಡೆಸಿದ ನಿರ್ದಿಷ್ಟ ದಾಳಿಯೂ ಸಹ ಸುಳ್ಳು’ ಎಂದು ಟೀಕಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry