7

ಆಧಾರ್‌ ಕಾರ್ಡ್‌ ಪಡೆಯಲು ಗ್ರಾಮಸ್ಥರ ಪರದಾಟ

Published:
Updated:

ಯಮಕನಮರಡಿ: ಸಮೀಪದ ಪಾಶ್ಚಾಪೂರದಲ್ಲಿ ಆಧಾರ್‌ ಕಾರ್ಡ್‌ ಮಾಡುವ ಸಿಬ್ಬಂದಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದಾಗಿ ಆಧಾರ ಕಾರ್ಡ್‌ ಮಾಡಿಸಲು ಗ್ರಾಮಸ್ಥರು ಪರದಾಡುತ್ತಿದ್ದಾರೆ.

ಈ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಆಗಮಿಸುವುದಿಲ್ಲ. ಆಗಾಗ ವಿದ್ಯುತ್ ಕೈಕೊಡುತ್ತದೆ. ಇಂತಹ ಸಂದರ್ಭದಲ್ಲಿ ಬಳಸಲು ಇಡಲಾಗಿರುವ ಬ್ಯಾಟರಿಗಳು ಕೆಟ್ಟುಹೋಗಿವೆ. ಪಾಶ್ಚಾಪುರ, ಮಾವನೂರ, ಬಸ್ಸಾಪುರ, ಶಿರೂರ ಹಾಗೂ ಗೋಕಾಕ ತಾಲ್ಲೂಕಿನ ಸಾರ್ವಜನಿಕರು ಈ ಕೇಂದ್ರಕ್ಕೆ ಬೆಳಿಗ್ಗೆಯೇ ಬಂದು ಸರದಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇದೆ.

ತಕ್ಷಣ ಈ ಸಮಸ್ಯೆಯನ್ನು ಬಗೆಹರಿಸಲು ತಾಲ್ಲೂಕು ಆಡಳಿತ ಗಮನಹರಿಸಬೇಕು. ಈ ಕೇಂದ್ರಕ್ಕೆ ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಬೇಕು, ಹೊಸ ಬ್ಯಾಟರಿ ಒದಗಿಸಬೇಕು ಎಂದು ಪಾಶ್ಚಾಪೂರ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry