7

ಬಿಜೆಪಿ ಕಚೇರಿ ಎದುರು ಪ್ರತಿಭಟನೆ

Published:
Updated:

ಧಾರವಾಡ: ‘ಮಹದಾಯಿ ನದಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಹಾಗೂ ಜನವರಿ ಒಳಗಾಗಿ ಬಗೆಹರಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಬಿಜೆಪಿ ಕಚೇರಿ ಎದುರು ಗುರುವಾರ ಧರಣಿ ನಡೆಸಿದರು.

900 ದಿನಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ರಾಜಕಾರಣಿಗಳು ಯಾವುದೇ ಪ್ರಯತ್ನ ನಡೆಸುತ್ತಿಲ್ಲ. ನದಿ ಜೋಡಣೆ ವಿಷಯದಲ್ಲಿ ಮಧ್ಯಪ್ರವೇಶಿಸಿ ವಿವಾದ ಬಗೆಹರಿಸಬೇಕಾದ ಪ್ರಧಾನಿ ನರೇಂದ್ರ ಮೋದಿ ಮೌನವಾಗಿದ್ದಾರೆ. ಸಂಸತ್ತಿನಲ್ಲಿ ಗಟ್ಟಿ ಧ್ವನಿಯಲ್ಲಿ ಮಾತನಾಡಿ ವಿವಾದ ಇತ್ಯರ್ಥ ಪಡಿಸಬೇಕಾಗಿದ್ದ ಬಿಜೆಪಿ ಸಂಸದರೂ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಸಲೀಂ ಸಂಗನಮುಲ್ಲ ಮಾತನಾಡಿ, ‘ವಿವಾದವನ್ನು ಜೀವಂತವಾಗಿಟ್ಟು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬದಲು, ವಿವಾದ ಬಗೆಹರಿಸಿ ನಾವೇ ಮಾಡಿದ್ದೆಂದು ಹೇಳಿಕೊಳ್ಳಲಿ. ಅದನ್ನು ಬಿಟ್ಟು, ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್‌ ಬರೆದ ಪತ್ರವನ್ನು ಸಭೆಗೆ ಓದಿದರೆ ಪ್ರಯೋಜನ ಏನು?  ರೈತರ ಬದುಕಿನ ಜತೆ ಚೆಲ್ಲಾಟವಾಡುತ್ತಿದ್ದಾರೆ’ ಎಂದು ಆರೋಪಿಸಿದರು. ಧರಣಿ ಸಂದರ್ಭದಲ್ಲಿ ಬಿಜೆಪಿ ಕಚೇರಿಯಲ್ಲಿ ಯಾರೂ ಇರಲಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry