7

ಇಂದಿರಾ ಕ್ಯಾಂಟೀನ್ ಸ್ಥಳಾಂತರಕ್ಕೆ ಒತ್ತಾಯ

Published:
Updated:

ಶಿವಮೊಗ್ಗ: ಇಂದಿರಾ ಕ್ಯಾಂಟೀನ್ ಸ್ಥಳಾಂತರಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಹಾ ನಗರಪಾಲಿಕೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಬಿ.ಎಚ್ ರಸ್ತೆಯ ಬಿಇಒ ಕಚೇರಿ ಎದುರು ಭಾಗದಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಭಾಗದಲ್ಲಿ ವಿವಿಧ ಹೋಟೆಲ್‌ಗಳು, ರಿಕ್ಷಾ ನಿಲ್ದಾಣವಿದೆ. ಅಲ್ಲದೆ ಈ ಭಾಗದಲ್ಲಿ ವಿದ್ಯಾರ್ಥಿಗಳು, ಪಾದಚಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಾರೆ.

ಕ್ಯಾಂಟೀನ್‌ನಲ್ಲಿ ಕಡಿಮೆ ದರದಲ್ಲಿ ತಿಂಡಿ, ತಿನಿಸು, ಊಟ ಸಿಗುವುದರಿಂದ ಜನದಟ್ಟಣೆ ಹೆಚ್ಚಾಗಿ ವಿದ್ಯಾರ್ಥಿಗಳಿಗೆ, ಪಾದಚಾರಿಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಹೇಳಿದರು. ವೇದಿಕೆಯ ಮುಖಂಡರಾದ ವೆಂಕಟೇಶ್, ಜಿ.ವಿಜಯಕುಮಾರ್, ಆರ್.ಮಂಜು, ಮಧು, ಶೈಲೇಶ್ ಕುಮಾ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry