ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶುದ್ಧ ಕುಡಿಯುವ ನೀರಿನ ಘಟಕ, ಮೂಲ ಸೌಕರ್ಯ ಕಲ್ಪಿಸಲು ಆಗ್ರಹ’

Last Updated 30 ಡಿಸೆಂಬರ್ 2017, 6:37 IST
ಅಕ್ಷರ ಗಾತ್ರ

ಬೈಲಹೊಂಗಲ: ತಾಲ್ಲೂಕಿನ ಗರ್ಜೂರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಗ್ರಾಮಸ್ಥರು ರಸ್ತೆ ತಡೆ ನಡೆಸಿ ಗುರುವಾರ ಪ್ರತಿಭಟನೆ ನಡೆಸಿದರು.

ಕರವೇ ಕಾರ್ಯಕರ್ತರು ಪ್ರಮುಖ ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿದರು. ರಸ್ತೆ ತಡೆ ನಡೆಸಿದ್ದರಿಂದ ಬೈಲಹೊಂಗಲ, ಸಂಗೊಳ್ಳಿ, ಚನ್ನಮ್ಮನ ಕಿತ್ತೂರ ಮಾರ್ಗವಾಗಿ ಸಂಚರಿಸುವ ವಾಹನ ಸವಾರರು, ಪ್ರಯಾಣಿಕರು ತೊಂದರೆ ಅನುಭವಿಸಿದರು.

ಕರವೇ ತಾಲ್ಲೂಕು ಸಂಚಾಲಕ ವಿಠ್ಠಲ ಭಂಗಿ ಮಾತನಾಡಿ, ‘ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇಲ್ಲವಾಗಿದೆ. ಚರಂಡಿ, ಸಿಮೆಂಟ್‌ ರಸ್ತೆ ಸೇರಿದಂತೆ ಮೂಲಸೌಕರ್ಯಗಳಿಲ್ಲ. ಕೆಲ ಕುಟುಂಬದವರಿಗೆ ಶೌಚಾಲಯ ವ್ಯವಸ್ಥೆ ಇಲ್ಲವಾಗಿದೆ’ ಎಂದರು.

ಶಾಖೆ ಘಟಕ ಅಧ್ಯಕ್ಷ ಸಿದ್ಧಪ್ಪ ಸವಳಗಟಗಿ, ಉಪಾಧ್ಯಕ್ಷ ಚಂದ್ರಪ್ಪ ನಾಗನೂರ ಮಾತನಾಡಿ, ‘ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಸಾಕಷ್ಟು ಬಾರಿ ಗ್ರಾಮ ಪಂಚಾಯ್ತಿಯವರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಆಕ್ರೋಶಗೊಂಡು ರಸ್ತೆ ತಡೆ ನಡೆಸಿದ್ದೇವೆ. ಕೂಡಲೇ ಎಚ್ಚೆತ್ತುಕೊಂಡು ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಸೌಕರ್ಯ ಕಲ್ಪಿಸಿಕೊಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಸಂಗೊಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಯಲ್ಲವ್ವ ಹಳೇಮನಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಖಜಾಂಚಿ ಬಸವರಾಜ ಕೋರಿ, ಕಾರ್ಯದರ್ಶಿ ಭೀಮಪ್ಪಾ ಕಮ್ಮಾರ, ಸಿದ್ದಪ್ಪ ಮುಂದಿನಮನಿ, ಸಿದ್ದಪ್ಪ ಕೊಪ್ಪದ, ಸಿದ್ದಪ್ಪ ಹುಬ್ಬಳ್ಳಿ, ದೊಡ್ಡವ್ವಾ ತಳವಾರ, ದ್ಯಾಮವ್ವಾ ಶಿರಸಂಗಿ, ಬಸವ್ವ ಪಟಾತ, ಗಂಗವ್ವಾ ಕರೀಕಟ್ಟಿ, ಸಿದ್ದವ್ವ ಹಿಟ್ಟಣಗಿ ಹಾಗೂ ಕರವೇ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT