7

ಮಧ್ಯರಂಗನಾಥ ದೇವಾಲಯಕ್ಕೆ ದೇವೇಗೌಡ ಭೇಟಿ

Published:
Updated:

ಕೊಳ್ಳೇಗಾಲ: ತಾಲ್ಲೂಕಿನ ಸತ್ತೇಗಾಲ ಗ್ರಾಮದ ಶಿವನಸಮುದ್ರದ ಮಧ್ಯರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಶುಕ್ರವಾರ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಭೇಟಿ ನೀಡಿದರು.

ಬಳಿಕ ಮಾತನಾಡಿದ ಅವರು, ‘ವೈಕುಂಠ ಏಕಾದಶಿ ಪ್ರಯುಕ್ತ ಆದಿರಂಗ, ಮಧ್ಯರಂಗ ಹಾಗೂ ಅಂತ್ಯರಂಗ ದೇವಸ್ಥಾನಗಳಿಗೆ ಭೇಟಿ ನೀಡಿದ್ದೇನೆ. ರಾಜ್ಯದ ಜನರಿಗೆ ಹಾಗೂ ರೈತರಿಗೆ ಸುಭಿಕ್ಷೆಯಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದೇನೆ’ ಎಂದರು.

ಈ ವೇಳೆ ದೇವೇಗೌಡ ಅವರ ಪತ್ನಿ ಚೆನ್ನಮ್ಮ, ಪುತ್ರ ಎಚ್.ಡಿ. ರೇವಣ್ಣ, ಮೊಮ್ಮಗ ಸೂರಜ್ ರೇವಣ್ಣ, ವಿಧಾನ ಪರಿಷತ್‌ ಸದಸ್ಯ ಟಿ.ಎ. ಶರವಣ, ಮಾಜಿ ಶಾಸಕ ಅನ್ನದಾನಿ, ಮುಖಂಡರಾದ ಲೋಕೇಶ್ ಮೌರ್ಯ, ಚಾಮರಾಜು, ಕಾಮರಾಜು, ನಾಗಸುಂದರ, ಸಂದೀಪ್‌ಕುಮಾರ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry