7

‘ದೇಶಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ’

Published:
Updated:

ಕಾರಟಗಿ: ಸ್ವಾತಂತ್ರ್ಯ ಚಳವಳಿ, ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಅಪಾರ ಕೊಡುಗೆ ನೀಡಿದೆ ಎಂದು ಕಾರಟಗಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಹಿಂದುಳಿದ ವರ್ಗಗಳ ಘಟಕದ ಪ್ರಧಾನ ಕಾರ್ಯದರ್ಶಿ ಶರಣಪ್ಪ ಕಾಯಿಗಡ್ಡಿ ಹೇಳಿದರು. ಪಟ್ಟಣದಲ್ಲಿ ಈಚೆಗೆ ಏರ್ಪಡಿಸಿದ್ದ ಕಾಂಗ್ರೆಸ್‌ ಪಕ್ಷದ 133ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ನೆಹರೂ ಅವರಿಂದ ಹಿಡಿದು ಮನಮೋಹನ್‌ ಸಿಂಗ್‌ವರೆಗೆ ಕಾಂಗ್ರೆಸ್‌ ನಾಯಕರು ದೇಶದ ಆಡಳಿತದ ಚುಕ್ಕಾಣಿ ಹಿಡಿದು, ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸಿದ್ದಾರೆ ಎಂದು ಹೇಳಿದರು. ಪುರಸಭೆ ಸದಸ್ಯ ಜಿ. ತಿಮ್ಮನಗೌಡ, ವಿಶೇಷ ಎಪಿಎಂಸಿ ಮಾಜಿ ಅಧ್ಯಕ್ಷ ಶಿವರೆಡ್ಡಿ ನಾಯಕ ಮಾತನಾಡಿದರು.

ತಂಗಡಗಿ ಟ್ರಸ್ಟ್‌ನ ನಾಗರಾಜ್ ತಂಗಡಗಿ, ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಕಾಶ ಭಾವಿ, ಎಪಿಎಂಸಿ ಸದಸ್ಯ ಶರಣೇಗೌಡ ಗುಂಡೂರ, ಪ್ರಮುಖರಾದ ಬಸವರಾಜ್ ಶೆಟ್ಟರ್, ತಾಯಪ್ಪ ಕೋಟ್ಯಾಳ, ಸಂಗನಗೌಡ ಕೋಲ್ಕಾರ, ವೀರೇಶ್ ಬೇವಿನಾಳ, ಶಕುಂತಲಮ್ಮ, ಹುಲಿಗೆಮ್ಮ ಅವರು ಕಾರ್ಯಕ್ರಮದಲ್ಲಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry