ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಪಡಿತರ ಚೀಟಿ ಮುಟ್ಟುಗೋಲು ಹಾಕಲು ಆಗ್ರಹ

Last Updated 30 ಡಿಸೆಂಬರ್ 2017, 20:27 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 25 ಲಕ್ಷಕ್ಕೂ ಅಧಿಕ ಅಕ್ರಮ ಪಡಿತರ ಚೀಟಿಗಳಿವೆ. ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘವು ಆಗ್ರಹಿಸಿದೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್‌, ‘ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ದಾವಣಗೆರೆಯಲ್ಲಿ ವಿಶೇಷ ಆಂದೋಲನ ನಡೆಸಿದಾಗ 15 ಸಾವಿರ ಅಕ್ರಮ ಪಡಿತರ ಚೀಟಿಗಳು ಇರುವುದು ಬೆಳಕಿಗೆ ಬಂದಿದೆ. ಆ ಬಳಿಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಘವು ಗುಪ್ತವಾಗಿ ತನಿಖೆ ನಡೆಸಿದಾಗ 25 ಲಕ್ಷ ಅಕ್ರಮ ಪಡಿತರ ಚೀಟಿಗಳು ಇರು‌ವುದು ಗೊತ್ತಾಗಿದೆ. ಈ ಬಗ್ಗೆ ಸರ್ಕಾರ ಸಮಗ್ರವಾಗಿ ತನಿಖೆ ನಡೆಸಿ ಅವುಗಳನ್ನು ಮುದ್ರಿಸಲು ನೆರವಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದರು.

‘ಅನಧಿಕೃತ ಪಡಿತರ ಚೀಟಿ ಹೆಚ್ಚಲು ಇಲಾಖೆಯ ಅಧಿಕಾರಿಗಳೇ ನೇರ ಹೊಣೆ. ಈ ಸಂಬಂಧ ಸಚಿವ ಯು.ಟಿ.ಖಾದರ್‌ ಅವರಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಈ ಸಂಬಂಧ ಭ್ರಷ್ಟಾಚಾರ ನಿಗ್ರ ದಳ (ಎಸಿಬಿ) ಹಾಗೂ ಲೋಕಾಯುಕ್ತಕ್ಕೆ ಶೀಘ್ರವೇ ದೂರು ನೀಡುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT