ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಮನೆಗೆ ಕುಮಾರಣ್ಣ ಕಾರ್ಯಕ್ರಮಕ್ಕೆ ಚಾಲನೆ ಜ.6 ರಂದು

Last Updated 31 ಡಿಸೆಂಬರ್ 2017, 5:15 IST
ಅಕ್ಷರ ಗಾತ್ರ

ಬಾಗಲಕೋಟೆ: ಬಾದಾಮಿ ತಾಲ್ಲೂಕಿನ ಕೆರೂರ ಪಟ್ಟಣದ ಮೆಣಸಗಿ ಹೈಸ್ಕೂಲ್ ಮೈದಾನದಲ್ಲಿ ಜ.6 ರಂದು ಮನೆಮನೆಗೆ ಕುಮಾರಣ್ಣ ಕಾರ್ಯಕ್ರಮಕ್ಕೆ ಚಾಲನೆ ಹಾಗೂ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಾದಾಮಿ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹನುಮಂತ ಮಾವಿನಮರದ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗಮಿಸಲಿದ್ದಾರೆ. ಜೊತೆಗೆ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ವಿಶ್ವನಾಥ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಅಲ್ಕೋಡು ಹನುಮಂತಪ್ಪ, ಶಾಸಕ ಎನ್.ಎಚ್.ಕೋನರೆಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

ಮನೆಮನೆಗೆ ತೆರಳಿ ಪಕ್ಷದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಕುಮಾರಸ್ವಾಮಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಸಮಾವೇಶಕ್ಕೆ 20 ಸಾವಿರ ಜನರು ಸೇರಲಿದ್ದಾರೆ. ಕುಳಿತುಕೊಳ್ಳಲು ಆಸನ ಹಾಗೂ ಊಟದ ವ್ಯವಸ್ಥೆ ಮಾಡಲಾಗುವುದು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ 20 ತಿಂಗಳ ಅವಧಿಯ ಸಾಧನೆಗಳನ್ನು ಮನೆಮನೆಗೆ ತೆರಳಿ ತಿಳಿಸಲಾಗುವುದು ಎಂದರು.

ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ರಾಜ್ಯದ ಜನತೆ ಉತ್ಸುಕರಾಗಿದ್ದಾರೆ. ರೈತರು, ಬಡವರು, ಹಿಂದುಳಿದವರಿಗೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ. ಮತಕ್ಷೇತ್ರದಲ್ಲಿ ನೇಕಾರರ, ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಆಡಳಿತದಲ್ಲಿ ಪಾರದರ್ಶಕತೆ ಅಳವಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಈ ವೇಳೆ ಮುಖಂಡರಾದ ಮಂಜುನಾಥ ಪಾಟೀಲ, ವೆಂಕಟೇಶ್ ಉಡುಪಿ, ಶೌಖತ್ ಸರ್ದಾರ್, ಚಂದ್ರಕಾಂತ ಹಾಗೂ ಮಂಜುನಾಥ ಗುಬ್ಬಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT