7

ಅಮಿತ್ ಷಾ ಭೇಟಿ ಮಾಡಿದ ಈಶ್ವರಸಿಂಗ್‌

Published:
Updated:

ಬೀದರ್‌: ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಈಶ್ವರಸಿಂಗ್ ಠಾಕೂರ್‌ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಅವರನ್ನು ನವದೆಹಲಿಯಲ್ಲಿ ಶನಿವಾರ ಭೇಟಿ ಮಾಡಿದರು.

‘30 ವರ್ಷಗಳಿಂದ ಸಂಘ ಪರಿವಾರಗಳಲ್ಲಿ ಸಕ್ರಿಯನಾಗಿದ್ದೇನೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌, ಹಿಂದೂ ಜಾಗರಣ ವೇದಿಕೆ, ಬಜರಂಗ ದಳಗಳಲ್ಲಿ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದೇನೆ. 2018 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬೀದರ್‌ ಕ್ಷೇತ್ರದ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಟಿಕೆಟ್‌ಗೆ ನನ್ನನ್ನು ಪರಿಗಣಿಸಬೇಕು’ ಎಂದು ಷಾ ಅವರಲ್ಲಿ ಮನವಿ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry