ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊದಲ ಸುತ್ತಿನ ಪಲ್ಸ್‌ ಪೋಲಿಯೊ ಜ.28ಕ್ಕೆ

ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ದೇಸಾಯಿ ಹೇಳಿಕೆ
Last Updated 31 ಡಿಸೆಂಬರ್ 2017, 10:21 IST
ಅಕ್ಷರ ಗಾತ್ರ

ಗದಗ: ‘ಜಿಲ್ಲೆಯಲ್ಲಿ ಮೊದಲ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮ ಜನವರಿ 28ರಿಂದ 31ರವರೆಗೆ ಹಾಗೂ ಎರಡನೇ ಸುತ್ತಿನ ಕಾರ್ಯಕ್ರಮ ಮಾರ್ಚ್ 11ರಿಂದ 14ರವರೆಗೆ ನಡೆಯಲಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ದೇಸಾಯಿ ಹೇಳಿದರು.

ಇಲ್ಲಿ ನಡೆದ ಜಿಲ್ಲಾಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಕಾರ್ಯಕ್ರಮದ ಪೂರ್ವಸಿದ್ಧತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಅವರು ತಿಳಿಸಿದರು.

‘ನಗರ, ಗ್ರಾಮೀಣ ಪ್ರದೇಶ, ತಾಂಡಾಗಳಲ್ಲಿ ಪಲ್ಸ್ ಪೋಲಿಯೊ ಕುರಿತು ಅರಿವು ಮೂಡಿಸಬೇಕು. ಗ್ರಾಹಕರ ಮೊಬೈಲ್‌ಗೆ ಪೋಲಿಯೊ ಕಾರ್ಯಕ್ರಮದ ಕುರಿತ ಸಂದೇಶ ಕಳುಹಿಸುವ ವ್ಯವಸ್ಥೆ ಮಾಡಬೇಕು. ಸರ್ಕಾರಿ, ಖಾಸಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಬೇಕು’ ಎಂದು ಸೂಚನೆ ನೀಡಿದರು.

‘ಸಂಚಾರಿ ವಾಹನಗಳ ಮೂಲಕವೂ ಲಸಿಕೆ ನೀಡಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳಬೇಕು. ಇದಕ್ಕೆ ಸಾರಿಗೆ ಇಲಾಖೆಯು ವಾಹನಗಳ ವ್ಯವಸ್ಥೆ ಕಲ್ಪಿಸಿ, ಕಾರ್ಯಕ್ರಮಕ್ಕೆ ಸಹಕಾರ ನೀಡಬೇಕು. ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು’ ಎಂದು ಹೇಳಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ, ‘ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಪೋಲಿಯೊ ಲಸಿಕೆ ಹಾಕಲಿದ್ದಾರೆ. ಜಿಲ್ಲೆಯಲ್ಲಿ 665 ಕೇಂದ್ರಗಳು, 623 ಮೊಬೈಲ್ ತಂಡ, 25 ಸಂಚಾರಿ ತಂಡಗಳನ್ನು ರಚಿಸಲಾಗಿದೆ’ ಎಂದು  ತಿಳಿಸಿದರು.

‘ಪೋಲಿಯೊ ಹನಿ ಶೇಖರಣೆಗಾಗಿ ವಿದ್ಯುತ್ ಅವಶ್ಯವಾಗಿದ್ದು, ನಗರ, ಗ್ರಾಮೀಣ ಪ್ರದೇಶಗಲ್ಲಿ 7 ದಿನಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಸುವಂತೆ ಹೆಸ್ಕಾಂ ಅಧಿಕಾರಿಗಳು ನಿಗಾವಹಿಸಬೇಕು. ಶಿಕ್ಷಣ ಇಲಾಖೆಯು ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಪೋಲಿಯೊ ಕಾರ್ಯಕ್ರಮದ ಕುರಿತು ಜಾಗೃತಿ ಮೂಡಿಸಬೇಕು’ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಎಚ್.ಕಬಾಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT