7

60 ದಿನ ಪೂರೈಸಿದ ಪೊನ್ನಂಪೇಟೆ ಹೋರಾಟ

Published:
Updated:

ಗೋಣಿಕೊಪ್ಪಲು: ನೂತನ ತಾಲ್ಲೂಕು ರಚನೆಗೆಗಾಗಿ ಪೊನ್ನಂಪೇಟೆ ಗಾಂಧಿ ಮಂಟಪದ ಬಳಿ 60 ದಿನಗಳಿಂದ ನಡೆಯುತ್ತಿರುವ ಹೋರಾಟ ಶನಿವಾರವೂ ಮುಂದುವರಿಯಿತು.

ಬೆಳಿಗ್ಗೆ 11 ಗಂಟೆಗೆ ಧರಣಿನಿರತರು ಗಾಂಧಿ ಮಂಟಪದ ಬಳಿಗೆ ಬಂದು ಘೋಷಣೆ ಕೂಗುತ್ತಾ ಧರಣಿ ನಡೆಸಿದರು.

ಸರ್ಕಾರ ಹೋರಾಟಕ್ಕೆ ನ್ಯಾಯ ಒದಗಿಸಲು ಮುಂದಾಗಬೇಕು. ಜಿಲ್ಲಾಧಿಕಾರಿ ಮೂಲಕ ಸಲ್ಲಿಸಿರುವ ದಾಖಲೆಗಳನ್ನು ಪರಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಚೆಪ್ಪುಡೀರ ಪೊನ್ನಪ್ಪ, ಚೆಪ್ಪುಡೀರ ಸೋಮಯ್ಯ, ನಾಗರಿಕ ವೇದಿಕೆ ಅಧ್ಯಕ್ಷ ಪಿ.ಬಿ.ಪೂಣಚ್ಚ, ಕೆ.ಎಂ ಗಣಪತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್.ಕುಶಾಲಪ್ಪ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry