6

ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ

Published:
Updated:

ಸುಂಟಿಕೊಪ್ಪ: ಇಲ್ಲಿನ ನಾಡ ಕಚೇರಿಯ ಸಮೀಪದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ದುರಸ್ತಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಶಾಸಕರ ನಿಧಿಯಲ್ಲಿ ಈ ಶುದ್ಧ ಕುಡಿಯುವ ನೀರಿನ ಘಟಕವು ಮಾರ್ಚ್ ತಿಂಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ತೆರೆಯಲಾಗಿತ್ತು. ಆದರೆ ಕಳೆದ ಒಂದು ವಾರದಿಂದ ಮೋಟರ್‌ ಕೆಟ್ಟಿರುವುದರಿಂದ ನೀರಿನ ಸರಬರಾಜು ಇಲ್ಲದೇ, ಘಟಕ ಬಾಗಿಲು ಮುಚ್ಚಿದೆ.

‘ಮೋಟರ್‌ ಬಂದಿದೆ, ಇಂದು ಅಳವಡಿಸುತ್ತೇವೆ, ನಾಳೆ ಅಳವಡಿಸುತ್ತೇವೆ’ ಎಂದು ಗ್ರಾಮ ಪಂಚಾಯಿತಿ ಸಿಬ್ಬಂದಿ ಹೇಳುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಪಿಡಿಒ, ಗ್ರಾ.ಪಂ ಅಧ್ಯಕ್ಷರು ಗಮನಹರಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಟ್ಟು ನೀರಿನ ಪೂರೈಕೆ ಮಾಡಲಿ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry