ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಟ್‌ಕಾಯಿನ್‌: ರಾಜ್ಯಗಳಿಂದ ಮಾಹಿತಿ ಕೇಳಿದ ಐ.ಟಿ ಇಲಾಖೆ

Last Updated 31 ಡಿಸೆಂಬರ್ 2017, 20:41 IST
ಅಕ್ಷರ ಗಾತ್ರ

ನವದೆಹಲಿ: ಬಿಟ್‌ಕಾಯಿನ್‌ ವಹಿವಾಟಿನ ರಾಜ್ಯವಾರು ಮಾಹಿತಿ ಪಡೆಯಲು ಆದಾಯ ತೆರಿಗೆ ಇಲಾಖೆ ಮುಂದಾಗಿದೆ.

ಡಿಜಿಟಲ್‌ ಕರೆನ್ಸಿ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದ ಬೆನ್ನಲ್ಲೇ ರಾಜ್ಯಗಳಲ್ಲಿ ಬಿಟ್‌ಕಾಯಿನ್‌ ವಹಿವಾಟು ನಡೆಸುತ್ತಿರುವವರ ಮತ್ತು ವಹಿವಾಟಿನ ಗಾತ್ರದ ಮಾಹಿತಿ ನೀಡುವಂತೆ ಕೇಳಿದೆ.

ಡಿಜಿಟಲ್‌ ಕರೆನ್ಸಿ ವಹಿವಾಟಿನ ಮಾಹಿತಿ ಪಡೆಯಲು ಈಚೆಗಷ್ಟೇ ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಲ್ಲಿ ಸಮೀಕ್ಷೆಯನ್ನೂ ನಡೆಸಲಾಗಿದೆ.

ಇಂತಹ ವಹಿವಾಟಿಗೆ ಕಾನೂನು ಮಾನ್ಯತೆ ಇಲ್ಲ. ಹೀಗಿದ್ದರೂ ವಹಿವಾಟು ನಿಯಂತ್ರಿಸಲು ಇರುವ ಮಾರ್ಗಗಳ ಬಗ್ಗೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಚಿಂತನೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT