ಸೋಮವಾರ, ಜುಲೈ 13, 2020
25 °C

ಪರಿವರ್ತನಾ ರ‍್ಯಾಲಿ: ಸಿದ್ಧತೆಗಳ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪರಿವರ್ತನಾ ರ‍್ಯಾಲಿ: ಸಿದ್ಧತೆಗಳ ಪರಿಶೀಲನೆ

ಸಿರುಗುಪ್ಪ: ಜನವರಿ 5ರಂದು ಬಿಜೆಪಿ ಪರಿವರ್ತನಾ ರ‍್ಯಾಲಿ ಹಾಗೂ ಬಹಿರಂಗ ಸಭೆ ಹಿನ್ನಲೆಯಲ್ಲಿ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿನ ಸಿದ್ಧತೆಗಳನ್ನು ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಶಂಕ್ರಪ್ಪ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಯಡಿಯೂರಪ್ಪ ಅವರು ಮಾನವೀಯ ದೃಷ್ಟಿಯಿಂದ ಮಹದಾಯಿ ಸಮಸ್ಯೆ ಇತ್ಯರ್ಥಗೊಳಿಸಲು ಮುಂದಾಗಿದ್ದರು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಕುತಂತ್ರದಿಂದ ಬೆಂಗಳೂರಿನ ಪಕ್ಷದ ಕಚೇರಿ ಮುಂದೆ ಹೋರಾಟಗಾರರು ಪ್ರತಿಭಟನೆ ಮಾಡುವಂತಾಯಿತು’ ಎಂದು ಆರೋಪಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರೊಂದಿಗೆ ಗೋವಾದ ವಿರೋಧಪಕ್ಷ ಕಾಂಗ್ರೆಸ್‌ ನಾಯಕರೊಂದಿಗೆ ಚರ್ಚಿಸಿ ನೀರು ಬಿಡಿಸುವಂತೆ ಮಾಡಬೇಕು’ ಎಂದು ಆಗ್ರಹಿಸಿದರು.

ರಾಜ್ಯ ಕಾರ್ಯಕಾರಿಣಿ ಸದಸ್ಯ ಎಂ.ಎಸ್.ಸೋಮಲಿಂಗಪ್ಪ ಮಾತನಾಡಿ, ‘ ರ್‌್ಯಾಲಿಯಲ್ಲಿ 40 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. 15ಸಾವಿರ ಆಸನಗಳ ಹಾಗೂ ಕುಡಿಯುವ ನೀರು, ಉಪಹಾರ ವ್ಯವಸ್ಥೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

ರಾಜ್ಯ ಕಾರ್ಯದರ್ಶಿ ತುಕರಾಂಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಾರಿಗೌಡ, ಜಿ.ಪಂ.ಸದಸ್ಯರಾದ, ರತ್ನಮ್ಮ ಅಡಿವೆಯ್ಯಸ್ವಾಮಿ, ಕೋಟೇಶ್ವರೆಡ್ಡಿ, ಬಿ.ಜಿ.ರವಿ, ರಾಜ್ಯ ಪರಿಷತ್ ಸದಸ್ಯ ಶಂಕರರೆಡ್ಡಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೊಂಚಿಗೇರಿ ನಾಗರಾಜಗೌಡ, ಬಸವರಾಜ, ಪ್ರೇಮಕುಂದರಗಿ, ಮಂಜುಳಾ, ಅಲಮೇಲಮ್ಮ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.