ಲೈಂಗಿಕ ಕಿರುಕುಳ ಪ್ರಾಚಾರ್ಯ ಬಂಧನ

7

ಲೈಂಗಿಕ ಕಿರುಕುಳ ಪ್ರಾಚಾರ್ಯ ಬಂಧನ

Published:
Updated:

ಚಿಕ್ಕಮಗಳೂರು: ನಗರದ ದ್ವಿತೀಯ ಪಿಯು ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕಾಲೇಜಿನ ಪ್ರಾಚಾರ್ಯ ಪರಮೇಶ್ವರಪ್ಪ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಾಂಶುಪಾಲರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ಅವರಿಗೆ ವಿದ್ಯಾರ್ಥಿನಿ ದೂರವಾಣಿ ಮೂಲಕ ತಿಳಿಸಿದ್ದಾರೆ. ಮಹಿಳಾ ಠಾಣೆ ಪೊಲೀಸರು ವಿದ್ಯಾರ್ಥಿನಿಯಿಂದ ದೂರು ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ. ಆರೋಪಿ ವಿರುದ್ಧ  ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry