8 ಕೆ.ಜಿ ಗಾಂಜಾ ವಶ: ಇಬ್ಬರ ಬಂಧನ

7

8 ಕೆ.ಜಿ ಗಾಂಜಾ ವಶ: ಇಬ್ಬರ ಬಂಧನ

Published:
Updated:

ಕೃಷ್ಣರಾಜಪೇಟೆ: ತಾಲ್ಲೂಕಿನ ಮುರುಕನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ ಭಾನುವಾರ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು 8 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ಮುರುಕನಹಳ್ಳಿಯ ಗುರುರಾಜು(40), ಪಾಂಡವಪುರದ ರಂಗೇಗೌಡ (54) ಬಂಧಿತರು. ಸರ್ಕಲ್ ಇನ್‌ಸ್ಪೆಕ್ಟರ್‌ ಎಚ್‌.ಬಿ.ವೆಂಕಟೇಶಯ್ಯ ಅವರು ನೇತೃತ್ವದ ತಂಡ ಭಾನುವಾರ ಖಚಿತ ಮಾಹಿತಿ ಮೇರೆಗೆ ತೋಟದ ಮನೆಗೆ ದಾಳಿ ನಡೆಸಿದೆ. ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 8 ಕೆ.ಜಿ ಗಾಂಜಾಸೊಪ್ಪು ಪತ್ತೆಯಾಗಿದೆ. ಹೊಸವರ್ಷದ ಸಂಭ್ರಮಾಚರಣೆ ನಡೆಸುವ ಯುವಜನರಿಗೆ ಮಾರಾಟ ಮಾಡಲು ತಂದಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

ಮಾರುವೇಷದ ಕಾರ್ಯಾಚರಣೆ: ನಾಗಮಂಗಲ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಮಾರುವೇಷ ಧರಿಸಿ ಗಾಂಜಾ ಕೊಳ್ಳುವವರಂತೆ ಹೋಗಿದ್ದ ಪೋಲಿಸರು ಮಾರಾಟ ಜಾಲ ಪತ್ತೆ ಮಾಡಿದ್ದಾರೆ. ಆರೋಪಿಗಳನ್ನು ಮಂಡ್ಯ ಜಿಲ್ಲಾ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿಸಲಾಯಿತು. ನ್ಯಾಯಾಧೀಶರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry