ಶನಿವಾರ, ಜೂಲೈ 4, 2020
21 °C

‘ಎಲ್ಲರಿಗೂ ಕಾನೂನು ಅರಿವು ಅಗತ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುರಪುರ: ‘ಕಾನೂನು ತಿಳಿವಳಿಕೆ ಕೊರತೆಯಿಂದ ಅವಘಡಗಳು ನಡೆಯುತ್ತಿವೆ. ಪ್ರತಿಯೊಬ್ಬ ನಾಗರಿಕ ಕಾನೂನು ಅರಿವು ಪಡೆಯಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾದೀಶ ಡಿ. ನಾಗರಾಜೇಗೌಡ ಹೇಳಿದರು.

ನಗರದ ನ್ಯಾಯಾಲಯದಲ್ಲಿ ಶನಿವಾರ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಜರುಗಿದ ಕಾನೂನು ಅರಿವು- ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರತಿಯೊಬ್ಬರೂ ಕಾನೂನನ್ನು ಅರಿತು ಗೌರವಿಸಿದರೆ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ. ಪೊಲೀಸರು ದೂರು ಸ್ವೀಕರಿಸದ ಸಂದರ್ಭದಲ್ಲಿ ಕಕ್ಷಿದಾರರು ನೇರವಾಗಿ ನ್ಯಾಯಾಲಯಕ್ಕೆ ಬಂದು ದೂರು ದಾಖಲಿಸಬಹುದು’ ಎಂದು ಅವರು ತಿಳಿಸಿದರು.

ವಕೀಲರಾದ ಚನ್ನಪ್ಪ ಹೂಗಾರ, ವಿಶ್ವಾಮಿತ್ರ ಕಟ್ಟಿಮನಿ ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಎಸ್.ಸಿದ್ರಾಮಪ್ಪ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶರಾದ ಅಮರನಾಥ ಬಿ.ಎನ್, ಸರ್ಕಾರಿ ಸಹಾಯಕ ಅಭಿಯೋಜಕ ಮಹಾಂತೇಶ ಮಸಳೆ, ವಕೀಲರಾದ ಯಂಕಾರಡ್ಡಿ ಹವಾಲ್ದಾರ್, ನಂದಣ್ಣ ಬಾಕ್ಲಿ ಇದ್ದರು.

ಶಿರಸ್ತೇದಾರ್ ಬಿ.ಗೌಡ ಸ್ವಾಗತಿಸಿದರು. ನಂದನಗೌಡ ಪಾಟೀಲ ನಿರೂಪಿಸಿದರು. ಮಂಜುನಾಥ ಹುದ್ದಾರ್ ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.