ಬುಧವಾರ, ಜೂಲೈ 8, 2020
29 °C

ಅನುದಾನ ಕಡಿತಗೊಳಿಸುವ ಬೆದರಿಕೆಯೊಡ್ಡಿದ ಟ್ರಂಪ್‌

ಪಿಟಿಐ Updated:

ಅಕ್ಷರ ಗಾತ್ರ : | |

ಅನುದಾನ ಕಡಿತಗೊಳಿಸುವ ಬೆದರಿಕೆಯೊಡ್ಡಿದ ಟ್ರಂಪ್‌

ವಾಷಿಂಗ್ಟನ್‌: ಕಳೆದ ಒಂದೂವರೆ ದಶಕದಿಂದ ಪಾಕಿಸ್ತಾನಕ್ಕೆ ನೆರವು ನೀಡುತ್ತಾ ಬಂದಿರುವ ಅಮೆರಿಕವು ಅನುದಾನ ಕಡಿತಗೊಳಿಸುವ ಬೆದರಿಕೆಯೊಡ್ಡಿದೆ. ‘ಅಫ್ಗಾನಿಸ್ತಾನದಲ್ಲಿ ನಾವು ಹುಡುಕುತ್ತಿರುವ ಉಗ್ರರಿಗೆ ಪಾಕಿಸ್ತಾನ ಸ್ವರ್ಗವಾಗಿದೆ. ಇದಕ್ಕಿಂತ ಏನೂ ಹೇಳಲ್ಲ’ ಎಂದು ಅವರು ವಿವರಿಸಿದ್ದಾರೆ.

'ಕಳೆದ 15 ವರ್ಷಗಳಿಂದ ಅಮೆರಿಕವು ಮೂರ್ಖತನದಿಂದ ಪಾಕಿಸ್ತಾನಕ್ಕೆ ₹ 2.10 ಲಕ್ಷ ಕೋಟಿ (33ಬಿಲಿಯನ್‌ ಡಾಲರ್‌) ನೆರವು ನೀಡುತ್ತಾ ಬಂದಿದೆ. ಅದಕ್ಕೆ ಪ್ರತಿಯಾಗಿ ಸುಳ್ಳು, ವಂಚನೆ ಬಿಟ್ಟು ಏನನ್ನೂ ನೀಡಿಲ್ಲ. ನಮ್ಮ ನಾಯಕರನ್ನೂ ಮೂರ್ಖರು ಎಂದು ಭಾವಿಸಿದ್ದಾರೆ’ ಎಂದು ಹೊಸ ವರ್ಷದ ಮೊದಲ ಟ್ವೀಟ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ.‌

‘ದೇಶದಲ್ಲಿರುವ ಭಯೋತ್ಪಾದಕ ಸಂಘಟನೆಗಳನ್ನು ನಿಯಂತ್ರಿಸುವಲ್ಲಿ ಪಾಕಿಸ್ತಾನ ವಿಫಲಗೊಂಡಿದ್ದರಿಂದ ಅಲ್ಲಿಗೆ ನೀಡಬೇಕಿದ್ದ ₹16 ಸಾವಿರ ಕೋಟಿ ಅನುದಾನ ತಡೆಹಿಡಿಯುವ ಬಗ್ಗೆ ಟ್ರಂಪ್‌ ಆಡಳಿತವು ಗಂಭೀರ ಚಿಂತನೆ ನಡೆಸಿದೆ’ ಎಂದು ನ್ಯೂಯಾರ್ಕ್‌ ಟೈಮ್ಸ್‌ ಕಳೆದ ವಾರವೇ ವರದಿ ಮಾಡಿತ್ತು.

ಸದುದ್ದೇಶಕ್ಕಾಗಿ ಪಾಕಿಸ್ತಾನಕ್ಕೆ ನೀಡುವ ಅನುದಾನವನ್ನು ಕಡಿತಗೊಳಿಸುವ ಸುಳಿವನ್ನು ಡೊನಾಲ್ಡ್‌ ಟ್ರಂಪ್‌ ಹಿಂದಿನ ತಿಂಗಳೇ ನೀಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.