ಲಂಡನ್: ಪಬ್‌ನಲ್ಲಿ ಗಲಾಟೆ ಮಾಡಿ ಅಮಾನತಿಗೆ ಒಳಗಾಗಿರುವ ಇಂಗ್ಲೆಂಡ್ ಕ್ರಿಕೆಟ್ ತಂಡದ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅವರಿಗೆ ಐಪಿಎಲ್‌ನಲ್ಲಿ ಆಡಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಅನುಮತಿ ನೀಡಿದೆ.

ಸೆಪ್ಟೆಂಬರ್‌ನಲ್ಲಿ ಅವರು ಅಮಾನತುಗೊಂಡಿದ್ದರು. ಹೀಗಾಗಿ ಆ್ಯಷಸ್ ಸರಣಿಗೆ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ಈ ತಿಂಗಳ ಎರಡನೇ ವಾರದಲ್ಲಿ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯಗಳ ಸರಣಿಗೆ ಆಯ್ಕೆ ಮಾಡಲಾಗಿತ್ತು. ಆದರೆ ಈಗ ಈ ಸರಣಿಯಿಂದಲೂ ಕೈಬಿಡಲಾಗಿದ್ದು ಅವರ ಬದಲಿಗೆ ಡೇವಿಡ್ ಮಲಾನ್‌ಗೆ ಸ್ಥಾನ ನೀಡಲಾಗಿದೆ.

ಐಪಿಎಲ್‌ನಲ್ಲಿ ಆಡಲು ಸೋಮವಾರ ಅನುಮತಿ ಲಭಿಸಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಆಟಗಾರರ ಹರಾಜಿನಲ್ಲಿ ಅವರ ಹೆಸರು ಸೇರಲಿದೆ. ಕಳೆದ ಬಾರಿಯ ಹರಾಜಿನಲ್ಲಿ ಅವರು ಅತಿ ಹೆಚ್ಚು, ₹ 14.5 ಕೋಟಿ ಮೊತ್ತಕ್ಕೆ ಮಾರಾಟವಾಗಿದ್ದರು.

ನ್ಯೂಜಿಲೆಂಡ್‌ನಲ್ಲಿ ನಡೆಯಲಿರುವ ಸ್ಥಳೀಯ ಲೀಗ್‌ನಲ್ಲಿ ಕ್ಯಾಂಟರ್‌ಬರಿ ತಂಡದ ಪರವಾಗಿ ಆಡುವುದಕ್ಕೂ ಅವರಿಗೆ ಅನುಮತಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.