ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15 ದಿನಗಳಲ್ಲಿ ಹೊಸ ತಾಲ್ಲೂಕುಗಳು ಕಾರ್ಯಾರಂಭ: ಸಚಿವ ಕಾಗೋಡು

Last Updated 1 ಜನವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮುಂದಿನ ಹದಿನೈದು ದಿನಗಳಲ್ಲಿ ಹೊಸ ತಾಲ್ಲೂಕುಗಳು ಅಸ್ತಿತ್ವಕ್ಕೆ ಬರಲಿದ್ದು, ತಾಲ್ಲೂಕು ಕಚೇರಿಗಳು ಕಾರ್ಯಾರಂಭ ಮಾಡಲಿವೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.

50 ಹೊಸ ತಾಲ್ಲೂಕುಗಳನ್ನು ಘೋಷಿಸಲಾಗಿದೆ. ಈ ಪೈಕಿ ಮೂರು ಅಥವಾ ನಾಲ್ಕು ತಾಲ್ಲೂಕುಗಳ ಆರಂಭ ವಿಳಂಬವಾಗಲಿದೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ಸೋಮವಾರ ತಿಳಿಸಿದರು.

‍ಪ್ರತಿ ಹೊಸ ತಾಲ್ಲೂಕು ಅಸ್ತಿತ್ವಕ್ಕೆ ತರಲು ಅಂದಾಜು ₹5 ಕೋಟಿ ಅಗತ್ಯ. ಆದರೆ, ಅಷ್ಟೂ ಹಣ ಒಂದೇ ಬಾರಿ ನೀಡಬೇಕಾಗಿಲ್ಲ. ಮೂಲಸೌಲಭ್ಯ ಸೃಜಿ
ಸಲು ಬೇಕಾಗಿರುವ ಅನುದಾನವನ್ನು ಹಂತ ಹಂತವಾಗಿ ನೀಡಲಾಗುವುದು ಎಂದರು. ತಹಶೀಲ್ದಾರ್‌ ಹುದ್ದೆಗೆ ಆಯ್ಕೆಯಾಗಿರುವವರು ತರಬೇತಿಯಲ್ಲಿ
ದ್ದಾರೆ. ಅವರೆಲ್ಲ ಕರ್ತವ್ಯಕ್ಕೆ ಹಾಜರಾದ ಕೂಡಲೇ ಕಚೇರಿಗಳು ಆರಂಭವಾಗಲಿವೆ ಎಂದರು.

ಅಕ್ರಮ–ಸಕ್ರಮ ಅವಧಿ ವಿಸ್ತರಣೆ: ಸರ್ಕಾರಿ ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿರುವವರು ಸಕ್ರಮಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರುವರಿ 26ರವರೆಗೂ ವಿಸ್ತರಿಸಲಾಗುವುದು ಎಂದು ಸಚಿವ ಕಾಗೋಡು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT