ಐಐಎಂಗಳಿಗೆ ಸ್ನಾತಕೋತ್ತರ ಪದವಿ ನೀಡುವ ಹಕ್ಕು

7

ಐಐಎಂಗಳಿಗೆ ಸ್ನಾತಕೋತ್ತರ ಪದವಿ ನೀಡುವ ಹಕ್ಕು

Published:
Updated:
ಐಐಎಂಗಳಿಗೆ ಸ್ನಾತಕೋತ್ತರ ಪದವಿ ನೀಡುವ ಹಕ್ಕು

ನವದೆಹಲಿ: ಇಂಡಿಯನ್ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ಗಳಿಗೆ (ಐಐಎಂ) ಹೆಚ್ಚಿನ ಸ್ವಾಯತ್ತತೆ ನೀಡಿ ಹೊಸ ಕಾನೂನು ರೂಪಿಸಲಾಗಿದೆ. ಇದರ ಪ್ರಕಾರ, ಐಐಎಂಗಳು ತಮ್ಮ ಪದವೀಧರರಿಗೆ ಡಿಪ್ಲೊಮಾ ಬದಲು ಸ್ನಾತಕೋತ್ತರ ಪದವಿ ನೀಡಬಹುದಾಗಿದೆ.

ಜತೆಗೆ ಐಐಎಂಗಳಿಗೆ ನಿರ್ದೇಶಕರನ್ನು ಹಾಗೂ ಬೋಧಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವ ಅಧಿಕಾರ ನೀಡಲಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾನುವಾರ ಇಂಡಿಯನ್ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಮಸೂದೆ 2017ಕ್ಕೆ ಸಹಿ ಹಾಕಿದ್ದು, ಇದೀಗ ಈ ಮಸೂದೆ ಕಾನೂನಾಗಿ ಜಾರಿಗೆ ಬಂದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry