ಧಾರವಾಡ: ಇಲ್ಲಿನ ಬನಶ್ರೀ ನಗರದ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಹಿರಿಯ ಪತ್ರಕರ್ತ ಸುರೇಶ ಜಾಡರ (50) ಮೃತಪಟ್ಟಿದ್ದಾರೆ.

ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್‌ಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಮುಂದಾದ ಸುರೇಶ, ಆಯತಪ್ಪಿ ಬಿದ್ದಿದ್ದಾರೆ. ತಲೆಗೆ ತೀವ್ರ ಪೆಟ್ಟಾಗಿದ್ದ ಅವರನ್ನು ಸತ್ತೂರಿನ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸಂಜೆ ಮೃತಪಟ್ಟರು.

‘ಪ್ರಜಾವಾಣಿ’, ‘ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರು, ಸದ್ಯ ‘ಸಂಯುಕ್ತ ಕರ್ನಾಟಕ’ ಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ಧಾರವಾಡದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.