ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ವೈದ್ಯಕೀಯ ಸಂಘಟನೆ ಕರೆ ನೀಡಿರುವ ಹೊರರೋಗಿ ಸೇವೆ ಬಂದ್‌ಗೆ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ

Last Updated 2 ಜನವರಿ 2018, 5:27 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕೇಂದ್ರ ಸರ್ಕಾರ ಮಂಡಿಸಿರುವ 'ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ-2017' ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘಟನೆ  ನೀಡಿರುವ 12 ಗಂಟೆ ಕಾಲ ಹೊರರೋಗಿ ಸೇವೆ ಬಂದ್‌ ಕರೆಗೆ  ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ.

ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳು ಬಂದ್ ಆಗಿವೆ. ನಗರದ ಪ್ರತಿಷ್ಠಿತ ಆಸ್ಪತ್ರೆಗಳಾದ ವಿವೇಕಾನಂದ ನರ್ಸಿಂಗ್ ಹೋಂ, ತತ್ವದರ್ಶ, ಶಕುಂತಲಾ, ಶಿವಕೃಪಾ, ಲೈಫ್ ಲೈನ್, ಸುಚಿರಾಯು ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ ಸಂಪೂರ್ಣ ಬಂದ್ ಆಗಿದ್ದು, ಸಂಜೆ 6 ಗಂಟೆ ನಂತರ ಅವುಗಳು ಪುನಃ ಕಾರ್ಯಾರಂಭ ಮಾಡಲಿವೆ. ಇನ್ನು ಕೆಲ ಖಾಸಗಿ ಆಸ್ಪತ್ರೆಗಳ ಎದುರು ಸೂಚನಾ ಫಲಕವನ್ನ ಅಳವಡಿಸಲಾಗಿದ್ದು, ಹೊರ ರೋಗಿಗಳು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ನಗರದ ಕಿಮ್ಸ್ ಆಸ್ಪತ್ರೆ ಮತ್ತು ಚಿಟಗುಪ್ಪಿ ಆಸ್ಪತ್ರೆಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT