ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಮುಷ್ಕರಕ್ಕೆ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ

Last Updated 2 ಜನವರಿ 2018, 4:40 IST
ಅಕ್ಷರ ಗಾತ್ರ

ಬೆಳಗಾವಿ: ರಾಷ್ಟ್ರೀಯ ವೈದ್ಯಕೀಯ ಆಯೋಗದ ಸ್ಥಾಪನೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಮುಷ್ಕರಕ್ಕೆ ಬೆಳಗಾವಿಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಖಾಸಗಿ  ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗಗಳು ಕಾರ್ಯನಿರ್ವಹಿಸುತ್ತಿಲ್ಲ. ಬೆಳಿಗ್ಗೆ 6ರಿಂದಲೂ ಬಂದ್ ಆಗಿವೆ. ಸಂಜೆ 6ರವರೆಗೂ ಬಂದ್ ಮುಂದುವರಿಯಲಿದೆ.

ಈ ಭಾಗದ ಪ್ರಮುಖ ಆಸ್ಪತ್ರೆಯಾದ ಕೆಎಲ್ಇ ಆಸ್ಪತ್ರೆಯಲ್ಲಿ ಸದ್ಯ ಹೊರ ರೋಗಿಗಳ ವಿಭಾಗ ಕಾರ್ಯನಿರ್ವಹಿಸುತ್ತಿದೆ. ಮುಷ್ಕರಕ್ಕೆ ಬೆಂಬಲ ನೀಡುವ ಕುರಿತು ನಿರ್ಧಾರ ಆಗಿಲ್ಲ ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿ ಬಸವರಾಜ ಸೊಂಟನವರ ತಿಳಿಸಿದರು.

ಬರುವ ಎಲ್ಲ ರೋಗಿಗಳಿಗೂ ಚಿಕಿತ್ಸೆ ನೀಡುವಂತೆ, ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಸರ್ಕಾರಿ  ಆಸ್ಪತ್ರೆಗಳ ವೈದ್ಯರಿಗೆ ಸೂಚಿಸಲಾಗಿದೆ. ಔಷಧಿಗಳ ಕೊರತೆ ಇಲ್ಲ ಎಂದು ಡಿಎಚ್ಒ ಅಪ್ಪಾಸಾಹ ನರಹಟ್ಟಿ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT