ವೈದ್ಯರ ಮುಷ್ಕರ: ತುಮಕೂರು ನಗರದಲ್ಲಿ ಉತ್ತಮ ಪ್ರತಿಕ್ರಿಯೆ

7

ವೈದ್ಯರ ಮುಷ್ಕರ: ತುಮಕೂರು ನಗರದಲ್ಲಿ ಉತ್ತಮ ಪ್ರತಿಕ್ರಿಯೆ

Published:
Updated:
ವೈದ್ಯರ ಮುಷ್ಕರ: ತುಮಕೂರು ನಗರದಲ್ಲಿ ಉತ್ತಮ ಪ್ರತಿಕ್ರಿಯೆ

ತುಮಕೂರು: ರಾಷ್ಟ್ರೀಯ ವೈದ್ಯಕೀಯ ಆಯೋಗದ ಸ್ಥಾಪನೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಮುಷ್ಕರಕ್ಕೆ ತುಮಕೂರು ನಗರದಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಖಾಸಗಿ ಆಸ್ಪತ್ರೆ ಗಳ ಬಳಿ ಬಂದ ರೋಗಿಗಳು ಚಿಕಿತ್ಸೆ ದೊರೆಯುವುದಿಲ್ಲ ಎನ್ನುವುದನ್ನು ತಿಳಿದು ವಾಪಸ್ ಹೋಗುತ್ತಿದ್ದಾರೆ. ಕೆಲವು ಹೆರಿಗೆ ಆಸ್ಪತ್ರೆಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ.

ಸರ್ಕಾರಿ ಆಸ್ಪತ್ರೆಗೆ ರೋಗಿಗಳ ಸಂಖ್ಯೆ ಹೆಚ್ಚಾಗಲಿದೆ. ಆದ್ದರಿಂದ ರಜೆಯಲ್ಲಿದ್ದ ಸಿಬ್ಬಂದಿಯನ್ನು ಕರೆಸಿಕೊಂಡಿದ್ದೇವೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವೀರಭದ್ರಯ್ಯ ತಿಳಿಸಿದರು. ಜಿಲ್ಲಾಧಿಕಾರಿಗೆ ಈ ಸಂಬಂಧ ಮನವಿ ಸಲ್ಲಿಸಲಾಗುವುದು ಎಂದು ಐಎಂಎ ಜಿಲ್ಲಾ ಘಟಕ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry