ಲಿಂಗಸುಗೂರು (ರಾಯಚೂರು ಜಿಲ್ಲೆ): ಇಲ್ಲಿಯ ಕಾಂಗ್ರೆಸ್ ಮುಖಂಡ ಶರಣಪ್ಪ ಮೇಟಿ ಅವರು ತಮ್ಮ ಪತ್ನಿ ಸರೋಜಾ ಪೋಳ ಅವರನ್ನು ಲಿಂಗಸುಗೂರು ವಿಧಾನಸಭಾ ಕ್ಷೇತ್ರದಿಂದ (ಪರಿಶಿಷ್ಟ ಜಾತಿಗೆ ಮೀಸಲು) ಕಣಕ್ಕೆ ಇಳಿಸುವ ತಯಾರಿ ನಡೆಸಿದ್ದಾರೆ ಎನ್ನುವ ವದಂತಿ ಜೋರಾಗಿದೆ.

ಇದಕ್ಕೆ ಪೂರಕವಾಗಿ, ಲಿಂಗಸುಗೂರಲ್ಲಿ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಸರೋಜಾ ಪೋಳ ಅವರು ಸೇವಾ ನಿವೃತ್ತಿ ಕೋರಿ ಶಿಕ್ಷಣ ಇಲಾಖೆಗೆ ನವೆಂಬರ್ 28ರಂದು ಪತ್ರ ಸಲ್ಲಿಸಿದ್ದಾರೆ. ಅದರ ಪ್ರತಿ ‘ಪ್ರಜಾವಾಣಿ’ಗೆ ದೊರೆತಿದೆ.

ತಮಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಬದಲು ತಮ್ಮ ಪತ್ನಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಶರಣಪ್ಪ ಮೇಟಿ ಅವರು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಲಿಂಗಾಯತ ಸಮಾಜದ ಶರಣಪ್ಪ ಅವರು ಪರಿಶಿಷ್ಟ ಜಾತಿಯ ಸರೋಜಾ ಅವರೊಂದಿಗೆ 20 ವರ್ಷಗಳ ಹಿಂದೆ ಮದುವೆಯಾಗಿದ್ದಾರೆ.

‘ಲಿಂಗಸಗೂರು ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಸರೋಜಾ ಪೋಳ ಅವರು ಪರಿಶಿಷ್ಟ ಜಾತಿಗೆ ಸೇರಿದ್ದು, ಅವರ ಸ್ಪರ್ಧೆಗೆ ಅಡ್ಡಿ ಇಲ್ಲ’ ಎಂದು ಪರಿಣತರು ಹೇಳುತ್ತಾರೆ. ‘ಕಾರ್ಯಕರ್ತರು ಮತ್ತು ಬೆಂಬಲಿಗರ ಒತ್ತಾಯದಂತೆ ಸರೋಜಾಳಿಂದ ಸರ್ಕಾರಿ ಸೇವೆಗೆ ರಾಜೀನಾಮೆ ಕೊಡಿಸಿರುವುದು ನಿಜ. ಹೈಕಮಾಂಡ್ ಅವಕಾಶ ಕೊಟ್ಟರೆ ಕಾಂಗ್ರೆಸ್ನಿಂದ ಸ್ಪರ್ಧಿಸುವುದು ಖಚಿತ’ ಎಂದು ಶರಣಪ್ಪ ಮೇಟಿ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.